ಬುಧವಾರ, ಜೂನ್ 16, 2021
27 °C

‘ಕೊರೊನಾ ಯೋಧರನ್ನು ಗೌರವಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೊರೊನಾ ನಿಯಂತ್ರಿಸಲು ವೈದ್ಯಕೀಯ ಸಿಬ್ಬಂದಿ ಮತ್ತು ವಿಜ್ಞಾನಿಗಳು ಯೋಧರಂತೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಸಿಬ್ಬಂದಿಯೂ ಶಕ್ತಿ ಮೋರಿ ಹೋರಾಡುತ್ತಿದ್ದಾರೆ. ಅವರನ್ನು ಸಾರ್ವಜನಿಕರು ಗೌರವದಿಂದ ಕಾಣಬೇಕು’ ಎಂದು ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೋಜಿ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ವೈದ್ಯಕೀಯ ಸಿಬ್ಬಂದಿ ಧೃತಿಗೆಡದೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಾ ಜನರನ್ನು ಕೋವಿಡ್‌ನಿಂದ ರಕ್ಷಿಸುತ್ತಿದ್ದಾರೆ. ಈ ಹೋರಾಟದಲ್ಲಿ ಅನೇಕ ಕೊರೊನಾ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಸೋಂಕನ್ನು ಹೋಗಲಾಡಿಸಬೇಕು’ ಎಂದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ‘ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ಸೌಲಭ್ಯಗಳನ್ನು ಹೊಂದಲಾಗಿದೆ. ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

‘ಲೈಫ್‌ಲೈನ್‌’, ‘ಮಧುಮೇಹ ವೈದ್ಯ’, ‘ಫೋಕಸ್’ ವಿಶೇಷ ಸಂಚಿಕೆಗಳನ್ನು ಬಿಡುಗಡೆ ಮಾಡಲಾಯಿತು. ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಜೆಎನ್ಎಂಸಿ ಪ್ರಾಚಾರ್ಯೆ ಡಾ.ಎನ್.ಎಸ್. ಮಹಾಂತಶೆಟ್ಟಿ, ಡಾ.ಆರ್‌.ಬಿ. ನೇರ್ಲಿ, ಡಾ.ಆರ್.ಎಸ್. ಮುಧೋಳ, ಡಾ.ಎಂ.ಎಸ್. ಕರಿಶೆಟ್ಟಿ, ಡಾ.ಬಸವರಾಜ ಬಿಜ್ಜರಗಿ, ವಿನಯ ಬೇದ್ರೆ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.