ಗುರುವಾರ , ಅಕ್ಟೋಬರ್ 22, 2020
24 °C

ಅಂಗನವಾಡಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ : ಎಸಿಡಿಪಿಒ ಶಂಕರ ಕುಂಬಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡಬಿ: ‘ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ಸರ್ಕಾರ ಅಂಗನವಾಡಿ  ಕೇಂದ್ರಗಳ ಮೂಲಕ ನೀಡುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಎಸಿಡಿಪಿಒ ಶಂಕರ ಕುಂಬಾರ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನ, ಅನ್ನ ಪ್ರಾಶನ, ಸೀಮಂತ ಹಾಗೂ ಮಕ್ಕಳ ಹುಟ್ಟು ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಅಂಥವರಿಗೆ ನೆರವಾಗಲೆಂದು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ’ ಎಂದರು.

ಎಸಿಡಿಪಿಒ ಪುಷ್ಪಾ ಹುಲ್ಲತ್ತಿ, ಯರಗಟ್ಟಿ ಆರೋಗ್ಯ ಶಿಕ್ಷಣಾಧಿಕಾರಿ ಐ.ಆರ್. ಗಂಜಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ವಿದ್ಯಾರಾಣಿ ಸೊನ್ನದ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಸುವರ್ಣಗೌರಿ ಕೊಣ್ಣೂರ, ಅಂಗನವಾಡಿ ಮೇಲ್ವಿಚಾರಕ ಎಸ್.ಎಂ. ಕುರಬೇಟ, ಜಿ.ಎಂ. ಮಡಿವಾಳರ, ಎಸ್.ಎಸ್. ಪಾಟೀಲ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಪಿ.ಆರ್. ರಾಯಪ್ಪಗೋಳ, ಆರೋಗ್ಯ ನಿರೀಕ್ಷಕ ಯು.ಬಿ. ಬೇಟಗೇರಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.