ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಲಕ್ಷ್ಮಿ

ಬೆಳಗಾವಿ: ‘ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ ಕೊಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.
ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಮಾರುತಿ ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನದ ಅಂಗವಾಗಿ ಫೋಟೊಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
‘ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಯಾರೂ ಹಿಂದೇಟು ಹಾಕಬಾರದು. ಸಾವಿತ್ರಿ ಬಾಯಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು’ ಎಂದರು.
ನೂತನವಾಗಿ ನಿರ್ಮಿಸಿದ ಸಿಸಿ ರಸ್ತೆಯನ್ನು ಉದ್ಘಾಟಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಗುಲಾಬಿ ಅ. ಕೋಲಕಾರ, ಅಪ್ಸರ್ ಜಮಾದಾರ, ಅಬೇದಾ ಸನದಿ, ಇಸ್ಮಾಯಿಲ್, ಹೊನಗೌಡ, ರಸೂಲ್, ಸಿಮಣ್ಣ, ಶಿವಪ್ಪ ಪೂಜೇರಿ, ಸುರೇಶ ವರ್ಧಮಾನ, ಪ್ರೇಮಾ ಕೋಲಕಾರ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.