ಮಂಗಳವಾರ, ಜೂನ್ 15, 2021
22 °C

‘ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಹೊರವಲಯದ ಕಣಬರ್ಗಿಯಲ್ಲಿರುವ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಮತಾ ಶಾಲೆಯಲ್ಲಿ 74ನೇ ಸ್ವಾತಂತ್ರೋತ್ಸವವನ್ನು ಶನಿವಾರ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರ ಬಾಗೇವಾಡಿ, ‘ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನ ಪ್ರಾಣಾರ್ಪಣೆ ಮಾಡಿದ್ದಾರೆ. 1857ರ ಪ್ರಥಮ ಸ್ವಾತಂತ್ರ್ಯ ಚಳವಳಿಯಿಂದ 1947ರ ಸ್ವಾತಂತ್ರೋತ್ಸವ ದಿನದವರೆಗಿನ ಸುದೀರ್ಘ ಹೋರಾಟದಲ್ಲಿ ಅನೇಕ ಮಹನೀಯರು ನಾಯಕತ್ವ ವಹಿಸಿದ್ದಾರೆ. ವಿವಿಧ ಸಂಸ್ಥಾನಗಳಲ್ಲಿ ಹಂಚಿ ಹೋಗಿದ್ದ ದೇಶವನ್ನು ಒಟ್ಟುಗೂಡಿಸುವಲ್ಲಿ ಮಹಾತ್ಮ ಗಾಂಧೀಜಿ ಯಶಸ್ವಿಯಾದರು. ಆ ಸೇನಾನಿಗಳನ್ನು ನಾವು ಸ್ಮರಿಸಬೇಕು’ ಎಂದರು.

ಕಾರ್ಯದರ್ಶಿ ರೇಣುಕಾ ಮಜಲಟ್ಟಿ, ಶಿಕ್ಷಕರಾದ ಸುನಂದಾ ಪಟ್ಟಣಶೆಟ್ಟಿ, ಜಯಶ್ರೀ ನಾಯಕ, ಶ್ರೀದೇವಿ ಕುಂಬಾರ, ಶಾಂತಾ ಮೋದಿ, ಲಕ್ಷ್ಮಿ ಆಲದಕಟ್ಟಿ ಹಾಗೂ ಮಲಿಕಜಾನ್ ಗದಗಿನ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.