ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆತ್ಮನಿರ್ಭರ ಭಾರತಕ್ಕೆ ಸಹಭಾಗಿಗಳಾಗೋಣ’

Last Updated 15 ಆಗಸ್ಟ್ 2021, 6:44 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿಯನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಕಾರ್ಯಾಧ್ಯಕ್ಷೆ ಹಾಗೂ ಸಂಸದೆ ಮಂಗಲಾ ಸುರೇಶ ಅಂಗಡಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿ, ‘ದೇಶದ ಕೈಗಾರಿಕೆ ಬೆಳವಣಿಗೆ, ಸ್ವದೇಶಿ ವಸ್ತುಗಳ ಬಳಕೆ ಮೂಲಕ ಆತ್ಮನಿರ್ಭರ ಭಾರತಕ್ಕಾಗಿ ಎಲ್ಲರೂ ಸಹಭಾಗಿಗಳಾಗಬೇಕು’ ಎಂದರು.

ಸಂಸ್ಥೆಯ ನಿರ್ದೇಶಕಿ ಡಾ.ಸ್ಫೂರ್ತಿ ಪಾಟೀಲ, ‘ದೇಶವು ಸ್ವಾತಂತ್ರ್ಯ ನಂತರ ಶೈಕ್ಷಣಿಕ, ತಾಂತ್ರಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಮೃದ್ಧಿ ಸಾಧಿಸಿದೆ. ಇಲ್ಲಿನ ಯುವಶಕ್ತಿ ಜಗತ್ತಿನಲ್ಲೇ ಪ್ರಸಿದ್ಧಿಯಾಗಿದ್ದು, ಯುವಕರು, ವಿದ್ಯಾರ್ಥಿಗಳು ಕೌಶಲಗಳನ್ನು ಕಲಿತು ದೇಶವನ್ನು ಉನ್ನತ ಮಟ್ಟಕ್ಕೆ ಒಯ್ಯುವಲ್ಲಿ ಶ್ರಮಿಸಬೇಕು’ ಎಂದರು.

ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ ಮಾತನಾಡಿದರು. ಅಂಗಡಿ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಪ್ರಾಚಾರ್ಯ ಪ್ರೊ.ಎಚ್.ಎಸ್. ಪಾಟೀಲ, ಎಂ.ಬಿ.ಎ. ನಿರ್ದೇಶಕ ಡಾ.ರಾಜೇಂದ್ರ ಇನಾಮದಾರ, ಅಂಗಡಿ ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ಪ್ರಾಚಾರ್ಯೆ ಪ್ರೊ.ಸಂಗೀತಾ ದೇಸಾಯಿ, ಅಂಗಡಿ ಇಂಟರ್‌ನ್ಯಾಷನಲ್ ಸ್ಕೂಲ್‌ ಮುಖ್ಯಶಿಕ್ಷಕಿ ಆಶಾ ರಜಪೂತ, ಆಡಳಿತಾಧಿಕಾರಿ ರಾಜು ಜೋಶಿ, ಡಾ.ಬಿ.ಟಿ. ಸುರೇಶ ಬಾಬು, ಡಾ.ಸಂಜಯ ಪೂಜಾರಿ, ಡಿಪ್ಲೊಮಾ ಪ್ರಾಚಾರ್ಯ ಪ್ರೊ.ಕೃಷ್ಣಕುಮಾರ ಜೇರೆ, ದೈಹಿಕ ಶಿಕ್ಷಣ ನಿರ್ದೇಶಕ ವಿಶಾಂತ ದಮೋಣೆ, ದೈಹಿಕ ಶಿಕ್ಷಕ ಮಹಾದೇವ ಶಿರಗಾಂವಕರ, ಬ್ರಿಜೇಶ ಪಾಟೀಲ, ಪ್ರಸಾದ ಪಂಚಾಕ್ಷರಿಮಠ, ಗಿರೀಶ ಮಡ್ಡಿಮನಿ, ಶಂಕರ ಹಿರೇಮಠ, ಪ್ರೇಮನಾಥ ಜವಳಿ, ತೇಜಸ್ವಿನಿ ಸೊಬರದ ಇದ್ದರು.

ಪ್ರೊ.ಧನಶ್ರೀ ಕುಲಕರ್ಣಿ ನಿರೂಪಿಸಿದರು. ಡಾ.ರಶ್ಮಿ ಮಾಲಗನ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT