ಬೆಳಗಾವಿ: ‘ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಚುನಾವಣೆ ನಡೆಯಬೇಕು. ಶಾಸಕರ ಆಯ್ಕೆಯಾಗಬೇಕು. ನಂತರವೇ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ತೀರ್ಮಾನವಾಗುತ್ತದೆ. ಈಗಲೇ ಆ ಬಗ್ಗೆ ಹೇಳಲಾಗುವುದಿಲ್ಲ. ಅಭಿಮಾನಿಗಳು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಿರ್ಧರಿಸುವವರು ಪಕ್ಷದ ಶಾಸಕರು ಹಾಗೂ ಹೈಕಮಾಂಡ್’ ಎಂದರು.

ರಮೇಶ ರಾಜೀನಾಮೆ ಬಗ್ಗೆ ಗೊತ್ತಿಲ್ಲ:‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ. ಅವರು ಕಾಂಗ್ರೆಸ್ಗೆ ಮರಳುವ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ. ಹೀಗಾಗಿ, ನಾನು ಆ ಬಗ್ಗೆ ಯಾವ ಅಭಿಪ್ರಾಯವನ್ನೂ ಹೇಳುವ ಪ್ರಶ್ನೆ ಇಲ್ಲ. ಅದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ಜಿಲ್ಲಾ ಮಟ್ಟದಲ್ಲಿದ್ದಂಥವರು ಆ ಬಗ್ಗೆ ಮಾತನಾಡಲು ಆಗುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.