ಬುಧವಾರ, ಅಕ್ಟೋಬರ್ 21, 2020
22 °C

ಬೆಳಗಾವಿ: ‘ಕಾಂಗ್ರೆಸ್ ಸೇವಾದಳ ಕಚೇರಿ ಉದ್ಘಾಟನೆಗೆ ರಾಹುಲ್‌ ಗಾಂಧಿಗೆ ಆಹ್ವಾನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿ ನಿರ್ಮಿಸಿರುವ ಕಾಂಗ್ರೆಸ್ ಸೇವಾದಳ ಕಟ್ಟಡದ ಉದ್ಘಾಟನೆ ಸಮಾರಂಭ ಮುಂದೂಡಲಾಗಿದೆ. ಅ.2ರಂದು ಅಲ್ಲಿ ಗಾಂಧಿ ಜಯಂತಿಯನ್ನು ಮಾತ್ರ ಆಚರಿಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಖುದ್ದು ಭೇಟಿಯಾಗಿ ಉದ್ಘಾಟನೆಗೆ ಆಹ್ವಾನಿಸಿ ಮುಂದಿನ ದಿನಾಂಕ ನಿಗದಿಪಡಿಸುತ್ತೇನೆ’ ಎಂದರು.

‘ಗಾಂಧಿ ಜಯಂತಿಯಂದು ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಎಸ್.ಆರ್. ಪಾಟೀಲ ಸೇರಿ ಗಣ್ಯರು ಸೇವಾದಳ ಕಚೇರಿಗೆ ಬರುವರು. ಅದಕ್ಕೂ ಮುನ್ನ, ಬೆಳಗಾವಿ ನಗರದ ಸಂಗೊಳ್ಳಿರಾಯಣ್ಣ ವೃತ್ತದ ಬಳಿ ನಿರ್ಮಿಸಿರುವ ಕಾಂಗ್ರೆಸ್‌ ಕಚೇರಿಯನ್ನು ಉದ್ಘಾಟಿಸುವರು. ಈ ಹಿಂದೆ ದಿನಾಂಕ ನಿಗದಿಯಾಗಿತ್ತು. ಆದರೆ, ಕೋವಿಡ್–19 ಲಾಕ್‌ಡೌನ್‌ ಕಾರಣ ಮುಂದೂಡಲಾಗಿತ್ತು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು