ಶನಿವಾರ, ಜುಲೈ 2, 2022
22 °C
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಎಚ್ಚರಿಕೆ

ಸಿಎಂ ಮನೆ ಎದುರು ಸತ್ಯಾಗ್ರಹ: ಜಯಮೃತ್ಯುಂಜಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೈಲಹೊಂಗಲ: ಸರ್ಕಾರ ಅಧಿವೇಶನದಲ್ಲಿ ಕೊಟ್ಟ ಮಾತಿನಂತೆ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ಮೇ 23ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ಮನೆ ಮುಂದೆ ಹಾಗೂ ರಾಜ್ಯದಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಇದು ಪಂಚಮಸಾಲಿ 2ಎ ಮೀಸಲಾತಿಗಾಗಿ ಮಾಡುವ ಮಾಡು ಇಲ್ಲವೇ ಮಡಿ ಹೋರಾಟವಾಗಲಿದೆ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದಿಂದ 2ಎ ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಮಾತನಾಡಿದರು.

ಸರ್ಕಾರ ಸಮಾಜದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಿಷ್ಕಾಳಜಿ ಮಾಡಿದರೆ ಬರುವ ದಿನಗಳಲ್ಲಿ  ಸಮಾಜದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಕಾಲಹರಣ ಮಾಡದೆ ಸಮಾಜದ ಬೇಡಿಕೆಯಾಗಿರುವ ಮೀಸಲಾತಿ ನೀಡಿ ನ್ಯಾಯ ನೀಡಬೇಕು ಎಂದು ಆಗ್ರಹಿಸಿದರು.

ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳನ್ನವರ, ಮಹಾಂತೇಶ ತುರಮರಿ, ಶಂಕರ ಮಾಡಲಗಿ, ಎಫ್.ಎಸ್.ಸಿದ್ದನಗೌಡರ, ಪಂಚನಗೌಡ ದ್ಯಾಮನಗೌಡರ, ರೋಹಿಣಿ ಬಾಬಾಸಾಹೇಬ ಪಾಟೀಲ, ಗೀತಾಂಜಲಿ ಮಾತನಾಡಿದರು.

ಮಿನಿ ವಿಧಾನಸೌಧದಲ್ಲಿರುವ ಬಸವೇಶ್ವರ ಮೂರ್ತಿ, ಚನ್ನಮ್ಮ ವೃತ್ತದಲ್ಲಿರುವ ಚನ್ನಮ್ಮಮೂರ್ತಿಗೆ ಮಾಲಾರ್ಪನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಇಂಚಲ ಕ್ರಾಸ್, ಎಪಿಎಂಸಿ ಗಣೇಶ ದೇವಸ್ಥಾನ, ಬಸ್ ನಿಲ್ಸಾಣ , ರಾಯಣ್ಣ ವೃತ್ತ, ಮೂಲಕ ಎಸಿ ಕಚೇರಿ ತಲುಪಿತು.

ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಮಾಜಿ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಸೋಮೇಶ್ವರ ಕಾರ್ಖಾನೆ ಉಪಾಧ್ಯಕ್ಷ ರಾಜು ಕುಡಸೋಮಣ್ಣವರ, ಮುಖಂಡರಾದ ಮಹೇಶ ಹರಕುಣಿ, ಮುರುಗೇಶ ಗುಂಡ್ಲೂರ, ಶ್ರೀಶೈಲ ಯಡಳ್ಳಿ, ಮಹಾಂತೇಶ ಮತ್ತಿಕೊಪ್ಪ, ವಿರೇಶ ಹಲಕಿ, ಗಂಗಾಧರ ಹುಲಕುಂದ, ಶ್ರೀಶೈಲ ಶರಣಪ್ಪನವರ, ಸಂಜೀವಗೌಡರ ಫಾಟೀಲ, ಆರ್,.ಕೆ. ಪಾಟೀಲ, ಪಿರಗೋಜಿ, ಈರಣ್ಣಾ ಬೇಟಗೇರಿ, ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಪಂಚಮಸಾಲಿ ಭಾಂದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು