ಶುಕ್ರವಾರ, ಅಕ್ಟೋಬರ್ 18, 2019
28 °C

ನೆರೆ: ಹೆಚ್ಚಿನ ಅನುದಾನಕ್ಕೆ ಒತ್ತಡ

Published:
Updated:

ಬೆಳಗಾವಿ: ‘ರಾಜ್ಯದಲ್ಲಿ ನೆರೆಯಿಂದಾಗಿ ಅಪಾರ ನಷ್ಟವಾಗಿದೆ. ಹೀಗಾಗಿ, ಹೆಚ್ಚಿನ ನೆರವು ನೀಡುವಂತೆ ಕೋರಿ ಸಂಸದರೆಲ್ಲವರೂ ಕೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುತ್ತೇವೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಮ್ಮೆಲ್ಲ ನಾಯಕರ ಪರಿಶ್ರಮದಿಂದಾಗಿ ಕೇಂದ್ರದಿಂದ ಪರಿಹಾರ ಹಣ ಬಂದಿದೆ. ₹ 1,200 ಕೋಟಿ ಮಧ್ಯಂತರ ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ’ ಎಂದರು.  ‘ಕಾಶ್ಮೀರ ನಮ್ಮ ದೇಶದ ಅವಿಭಾಜ್ಯ ಭಾಗವಾಗಿದೆ. ಈ ಪ್ರದೇಶದ ಬಗ್ಗೆಯೂ ಕವಿಗಳು ಕಾವ್ಯ ರಚಿಸಬೇಕು’ ಎಂದು ಕೋರಿದರು. ‘ಐತಿಹಾಸಿಕ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದರು.

Post Comments (+)