ಗುರುವಾರ , ಆಗಸ್ಟ್ 5, 2021
28 °C

ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ವಡಗಾವಿಯ ಲಕ್ಷ್ಮಿನಗರದಲ್ಲಿ ನೇಕಾರ ಕೂಲಿಕಾರ್ಮಿಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಸುಜೀತ ಉಪರಿ (38) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ತವರಿಗೆ ಕಳುಹಿಸಿದ್ದರು ಎನ್ನಲಾಗಿದೆ. ಬೀಗ ಹಾಕಿದ್ದ ಮನೆ ಒಳಗಿನಿಂದ ದುರ್ವಾಸನೆ ಬರುತ್ತಿದ್ದುದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಗುರುವಾರ ರಾತ್ರಿ ಪೊಲೀಸರು ಬೀಗ ಒಡೆದು ಒಳಗಡೆ ನೋಡಿದಾಗ ಸುಜಿತ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

‘ಸಾಲ ಮಾಡಿದ್ದ ಅವರು, ಕೋವಿಡ್–19 ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಗಳಿಕೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದರು ಎಂದು ಮಾಹಿತಿ ಬಂದಿದೆ’ ಎಂದು ನೇಕಾರ ಸಮಾಜದ ಮುಖಂಡರು ಪತ್ರಕರ್ತರಿಗೆ ತಿಳಿಸಿದರು.

ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.