ಬೆಳಗಾವಿ (ಸುವರ್ಣಸೌಧ): ‘ವಿದ್ಯುತ್ ಮಗ್ಗಗಳಿಗೆ ಹತ್ತು ಎಚ್ಪಿವರೆಗೆ 2023ರ ನವೆಂಬರ್ನಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್ನಿಂದಲೇ ಅನ್ವಯಗೊಳಿಸಬೇಕೆಂಬ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

‘ನೇಕಾರರ ವಿದ್ಯುತ್ ಬಿಲ್ ಅಂದಾಜು ₹20 ಕೋಟಿಯಷ್ಟು ಬಾಕಿಯಿದೆ. ಅದನ್ನು ಮನ್ನಾ ಮಾಡುವುದರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವವರೆಗೆ ವಿದ್ಯುತ್ ಪೂರೈಕೆ ಕಂಪನಿಗಳು ನೇಕಾರ ಕೈಮಗ್ಗಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ನಿರ್ದೇಶನ ನೀಡಬೇಕು’ ಎಂದು ಜೊಲ್ಲೆ ಆಗ್ರಹಿಸಿದರು. ಬಿಜೆಪಿಯ ಸಿದ್ದು ಸವದಿ, ಬಿ.ವೈ. ವಿಜಯೇಂದ್ರ, ಪ್ರಭು ಚವ್ಹಾಣ್ ದನಿಗೂಡಿಸಿದರು.

‘ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಎಚ್ಪಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 2023ರ ನವೆಂಬರ್ನಿಂದ ಈ ಆದೇಶ ಜಾರಿಗೆ ಬಂದಿದ್ದು, ಅಂದಿನಿಂದ ಅನ್ವಯವಾಗುತ್ತಿದೆ. ನೇಕಾರರ ಬೇಡಿಕೆಯಂತೆ ಹತ್ತರಿಂದ 20 ಎಚ್ಪಿವರೆಗಿನ ಪ್ರತಿ ಯೂನಿಟ್ಗೆ ₹1.25 ರಿಯಾಯಿತಿ ದರದಲ್ಲಿ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಗಳಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು ₹130 ಕೋಟಿ ವೆಚ್ಚವಾಗುತ್ತಿದೆ’ ಎಂದು ಸಚಿವರು ವಿವರಿಸಿದರು.

‘ಅನೇಕ ನೇಕಾರರು ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರುವವರೆಗೆ ವಿದ್ಯುತ್ ಬಿಲ್ ಪಾವತಿ ಮಾಡಿದ್ದಾರೆ. ಕೆಲವರು ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ. ಯಾವುದೇ ಯೋಜನೆ ಸರ್ಕಾರದ ಆದೇಶ ಹೊರಬಿದ್ದ ನಂತರ ಅನ್ವಯವಾಗುತ್ತದೆ. ಆದರೂ, ಆದೇಶ ಹೊರಬೀಳುವ ಹಿಂದಿನ ಅವಧಿಗೂ ಅನ್ವಯ ಮಾಡಬೇಕು ಎಂಬ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.