ಬೆಳಗಾವಿ: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಜಿಲ್ಲೆಯಾದ್ಯಂತ ಜೂನ್ 19ರ ಬೆಳಿಗ್ಗೆ 6ರಿಂದ ಜೂನ್ 21ರ ಬೆಳಿಗ್ಗೆ 6ರವರೆಗೆ ಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.

ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಬೇಕು. ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಂಗಡಿಗಳನ್ನು ತೆರೆದು ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಬಹುದು. ಪ್ರತಿ ಗ್ರಾಮದಿಂದ ಐವರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶ ಇರುತ್ತದೆ.

ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರ ಪರಿಕರಗಳ ಮಾರಾಟ ಮಳಿಗೆಗಳು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ತೆರೆಯಲು ಅವಕಾಶವಿದೆ. ಬರಲು ರೈತರು ಗ್ರಾಮ ಪಂಚಾಯಿತಿ ಪಿಡಿಒ ಅಥವಾ ಗ್ರಾಮಲೆಕ್ಕಿಗರ ಅನುಮತಿ ಪತ್ರ ತರಬೇಕು. ಪೂರ್ವಾನುಮತಿ ಪಡೆದು ನಿಗದಿಪಡಿಸಿರುವ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.