ಬೆಳಗಾವಿ: ‘ಕಾಂಗ್ರೆಸ್ ವಿಚಾರದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಮ್ಮದೇ ಭಾಷೆಯಲ್ಲಿ ಸತ್ಯ ಸಂಗತಿಗಳನ್ನೇ ಹೇಳಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ಗೆ ಕಡಿವಾಣ ಹಾಕಲು ನಿರ್ಣಯ ಮಾಡಿದ್ದೇವೆ. ಸಾಧ್ಯವಾದರೆ ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಬೇಕು ಎಂದು ಚರ್ಚೆಯಾಗಿದೆ’ ಎಂದರು.

‘ಮಸ್ಕಿ ಹಾಗೂ ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷವು ದೊಡ್ಡ ಅಂತರದಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.