ಮಂಗಳವಾರ, ಅಕ್ಟೋಬರ್ 27, 2020
25 °C

ಪತ್ನಿ ಕುಟುಂಬದವರು ಕ್ಷೇಮ: ಕಲ್ಯಾಣ್ ಸಂತಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಂಚಕರ ಷಡ್ಯಂತ್ರಕ್ಕೆ ಸಿಲುಕಿದ್ದ ಪತ್ನಿ, ಅತ್ತೆ ಹಾಗೂ ಮಾವ ಪೊಲೀಸರ ಶ್ರಮದಿಂದಾಗಿ ಈಗ ಕ್ಷೇಮವಾಗಿದ್ದಾರೆ’ ಎಂದು ಚಲನಚಿತ್ರ ಗೀತರಚನೆಕಾರ ಕೆ. ಕಲ್ಯಾಣ್ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನನ್ನ ಕುಟುಂಬದ ನೆರವಿಗೆ ನಿಂತ ಪೊಲೀಸರಿಗೆ ಹಾಗೂ ವಾಸ್ತವಾಂಶವನ್ನು ಜನರಿಗೆ ತಲುಪಿಸಿದ ಮಾಧ್ಯಮದವರಿಗೂ ಧನ್ಯವಾದ ತಿಳಿಸುತ್ತೇನೆ’ ಎಂದರು.

‘ಪತ್ನಿ, ಅತ್ತೆ ಹಾಗೂ ಮಾವ ನಾಪತ್ತೆ ಆಗಿದ್ದರಿಂದ ನಾನು ಪೊಲೀಸರಿಗೆ ದೂರು ನೀಡಿದ್ದೆ. ಅವರು ಆರೋಪಿ, ಮಂತ್ರವಾದಿ ಶಿವಾನಂದ ವಾಲಿಯನ್ನು ಬಂಧಿಸಿದ್ದಾರೆ. ತಪ್ಪು‌ ಮಾಡಿದವರಿಗೆ ಕಾನೂನು ಪ್ರಕಾರ ಏನು ಆಗಬೇಕೋ ಆಗುತ್ತದೆ. ಪತ್ನಿ, ಅತ್ತೆ, ಮಾವ ಕ್ಷೇಮವಾಗಿ ಅವರ ಸಂಬಂಧಿಕರ ಮನೆಯಲ್ಲಿ ನೆಮ್ಮದಿಯಾಗಿದ್ದಾರೆ. ಹೀಗಾಗಿ, ನಿರಾಳತೆಯಿಂದ ಬೆಂಗಳೂರಿಗೆ ಹೋಗುತ್ತಿದ್ದೇನೆ’ ಎಂದು ತಿಳಿಸಿದರು.

‘ನನ್ನ ಕೌಟುಂಬಿಕ ವಿಚಾರದಲ್ಲಿ ಆಕಸ್ಮಿಕವಾಗಿ ಬಂದ ಮೂರನೇ ವ್ಯಕ್ತಿಗಳಿಂದ ನಮಗೆ ತೊಂದರೆ ಆಗಿತ್ತು. ನಮ್ಮವರು ಬಾಯ್ತಪ್ಪಿ ಮಾಡಿದ್ದ ಆರೋಪಗಳಿಗೆ  ನಾನು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ಕೊಡಬೇಕಾಯಿತು’ ಎಂದರು.

‘ಯಾರನ್ನಾದರೂ ಮನೆ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಅವರ ಪೂರ್ವಾಪರ ತಿಳಿದುಕೊಳ್ಳಿ. ಸ್ನೇಹ ಗಳಿಸಿ ವಂಚಿಸುವವರು ಇರುತ್ತಾರೆ. ಹೀಗಾಗಿ, ಈ ಬಗ್ಗೆ ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು