ಬುಧವಾರ, ಜನವರಿ 27, 2021
18 °C

‘3 ಲಕ್ಷ ಜನ ಸೇರಿಸ್ತೀವಿ, ಕೋವಿಡ್ ನಿಯಮ ಪಾಲಿಸ್ತೀವಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.17ರಂದು ನಡೆಯುವ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸುತ್ತೇವೆ. ಕೋವಿಡ್ ನಿಯಮಗಳನ್ನೂ ಪಾಲಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶದ ಸಿದ್ಧತೆ ಬಗ್ಗೆ ಮುಖಂಡರೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತರನ್ನು ಅಭಿನಂದಿಸುವುದು, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣಾ ಸಿದ್ಧತೆಗೆ ರಣಕಹಳೆ ಮೊಳಗಿಸುವುದು ಸಮಾವೇಶದ ಉದ್ದೇಶವಾಗಿದೆ. ಇದರಿಂದ ಈ ಭಾಗದಲ್ಲಿ ಪಕ್ಷದ ಶಕ್ತಿ ವೃದ್ಧಿಸಲಿದೆ. ಜಿಲ್ಲೆಯ ಎಲ್ಲ ಮುಖಂಡರೂ ಸಂಘಟಿತರಾಗಿ ಸಮಾವೇಶ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದೇವೆ’ ಎಂದರು.

‘ಸಮಾವೇಶದ ನಂತರ ಅಮಿತ್ ಶಾ ಅವರೊಂದಿಗೆ ಮುಖಂಡರ ಸಭೆಯನ್ನು ನಡೆಸುವ ಉದ್ದೇಶವೂ ಇದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು