ಗುರುವಾರ , ಮೇ 13, 2021
22 °C

ಕೋವಿಡ್ ಮಾರ್ಗಸೂಚಿ ಪಾಲಿಸಿ ಮತ ಎಣಿಕೆ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯು ಈ ಹಿಂದೆ ನಿಗದಿಯಾಗಿದ್ದಂತೆಯೇ ಮೇ 2ರಂದು ನಗರದ ಆರ್‌‍ಪಿಡಿ ಕಾಲೇಜಿನಲ್ಲಿ ನಡೆಯಲಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಮೇ 4ರವರೆಗೆ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಇರುತ್ತದೆ. ಮತ ಎಣಿಕೆಯು ಭಾನುವಾರ ಬಂದಿದೆ. ಅಂದು ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮೊದಲಾದವರು ಮತ ಎಣಿಕೆ ಕೇಂದ್ರದ ಬಳಿ ಸೇರುವುದು, ಗೆದ್ದವರು ವಿಜಯೋತ್ಸವ ಆಚರಿಸುವುದು, ಮೆರವಣಿಗೆ ನಡೆಸುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

‘ಸರ್ಕಾರದ ಆದೇಶದ ಪ್ರಕಾರ ಅಂದು ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಹೊರಗಡೆ ಅನವಶ್ಯವಾಗಿ ಓಡಾಡುವಂತಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಮತ ಎಣಿಕೆ ಕಾರ್ಯ ನಡೆಸಲಾಗುವುದು. ಕೆಂದ್ರದ ಹೊರಗಡೆ ಜನರು ಸೇರುವುದಕ್ಕೆ ಅವಕಾಶ ಇರುವುದಿಲ್ಲ. ಸೋಂಕು ನಿಯಂತ್ರಿಸುವ ಉದ್ದೇಶದಿಂದ ಮತ ಎಣಿಕೆ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿಗಳನ್ನು ಬಳಸಲಾಗುವುದು. ಅಗತ್ಯ ಬಿದ್ದರೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು