ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ರಮೇಶ ಜಾರಕಿಹೊಳಿ ಮುಂದುವರಿಯುವರೇ?

Last Updated 16 ಮಾರ್ಚ್ 2021, 13:45 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸಲು ‘ಸಪ್ತ ಉಸ್ತುವಾರಿ’ಗಳನ್ನು ಬಿಜೆಪಿಯಿಂದ ನೇಮಿಸಲಾಗಿತ್ತು. ಈ ತಂಡದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಇದ್ದರು. ತಮ್ಮ ವಿರುದ್ಧದ ಸಿ.ಡಿ. ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ಉಸ್ತುವಾರಿಗಳಲ್ಲೊಬ್ಬರಾಗಿ ಮುಂದುವರಿಸಲಾಗುವುದೇ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಗೋಕಾಕ ವಿಧಾನಸಭಾ ಕ್ಷೇತ್ರವೂ ಬರುತ್ತದೆ. ರಮೇಶ ಜಾರಕಿಹೊಳಿ ಆ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ.

ಉಳಿದಂತೆ, ತಂಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಜಗದೀಶ ಶೆಟ್ಟರ್, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮತ್ತು ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT