ಗುರುವಾರ , ಜುಲೈ 29, 2021
21 °C

ಪತಿ ಕನಸು ನನಸಾಗಿಸುವೆ: ಮಂಗಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದ ಲಕ್ಷ್ಮೀಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿ, ‘ಹುಕ್ಕೇರಿ ಶ್ರೀಗಳ ಮೇಲೆ ಪತಿ ದಿವಂಗತ ಸುರೇಶ ಅಂಗಡಿ ವಿಶೇಷ ಶ್ರದ್ಧೆ ಇಟ್ಟುಕೊಂಡಿದ್ದರು. ಅವರ ಮಾರ್ಗದರ್ಶನದಲ್ಲಿ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಕನಸನ್ನು ನಾನು ನನಸು ಮಾಡುತ್ತೇನೆ. ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.

‘ದಿ.ಸುರೇಶ ಅಂಗಡಿ ಅವರು ಸಂಸದರಾಗಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅವರ ಸ್ಥಾನವನ್ನು ಸಂಸದೆಯಾಗಿ ಮಂಗಲಾ ತುಂಬಲಿ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿಕೊಡಲಿ’ ಎಂದು ಸ್ವಾಮೀಜಿ ಹಾರೈಸಿದರು.

ವಿರೂಪಾಕ್ಷಯ್ಯ ನೀರಲಗಿಮಠ, ಸೋಮಶೇಖರ ಹಿರೇಮಠ, ಸಂಗಯ್ಯ ಶಾಸ್ತ್ರಿ, ಚಂದ್ರಶೇಖರ ಶಾಸ್ತ್ರಿ, ಶಂಕರಯ್ಯ ಶಾಸ್ತ್ರಿ, ಶಿವಾನಂದ ಹಿರೇಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.