ಮಂಗಳವಾರ, ನವೆಂಬರ್ 29, 2022
20 °C

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ (ಬೆಳಗಾವಿ ಜಿಲ್ಲೆ): ಇಲ್ಲಿನ ಖಿಲ್ಲೆ ಪ್ರದೇಶದ ಮನೆಯೊಂದರ ಹೊರ ಆವರಣದಲ್ಲಿ ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ.

ಮೃತರನ್ನು ನಗರದ ಮರಾಠಾ ಓಣಿಯ ನಿವಾಸಿ ರೇಷ್ಮಾ ಉರೂಫ್‌ ಜಬೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಮಹಿಳೆ ಸಾವಗೀಡಾಗಿದ್ದು ಬೇರೆಯವರ ಮನೆ. ಮನೆಯ ಮಾಲೀಕರು ಬೆಳಿಗ್ಗೆ ಎದ್ದು ನೋಡಿ ಬೆಚ್ಚಿ ಬಿದ್ದರು. ಈ ಮಹಿಳೆಯ ಯಾವಾಗ ಇಲ್ಲಿಗೆ ಬಂದು, ಮನೆಯ ವರಾಂಡದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಸಾವು ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು