ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಸದಾಶಿವನಗರದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು

Published 23 ಫೆಬ್ರುವರಿ 2024, 15:51 IST
Last Updated 23 ಫೆಬ್ರುವರಿ 2024, 16:59 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಯುವತಿಯೊಬ್ಬರು ಬುಧವಾರ ರಾತ್ರಿ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ದೊ ಪಚೆಕೊ (21) ಮೃತ ಯುವತಿ. ಓಶಾನೋ ತಮ್ಮ ಸಾಕು ನಾಯಿಯನ್ನು ತೆಗೆದುಕೊಂಡು ಟೆರೆಸ್‌ ಮೇಲೆ ಹೋಗಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಓಶಾನಾ ಪಾಲಕರು ಎಪಿಎಂಸಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ತನಿಖೆ ನಡೆಸುವುದು ಅಗತ್ಯವಾಗಿದೆ. ಇದು ಸಹಜ ಸಾವೋ, ಆತ್ಮಹತ್ಯೆಯೋ ಎಂದು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT