ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

Published 3 ಮಾರ್ಚ್ 2024, 19:41 IST
Last Updated 3 ಮಾರ್ಚ್ 2024, 19:41 IST
ಅಕ್ಷರ ಗಾತ್ರ

ಕಾಗವಾಡ: ತಾಲ್ಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೋಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸಂತ್ರಸ್ತೆಯು ಸರ್ವೆ ನಂ.237/‘ಎ’ ಸರ್ಕಾರದಿಂದ ಜಮೀನು ಮಂಜೂರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿತರು ಜಮೀನಿನ ಒತ್ತುವರಿ ಹಾಗೂ ರಸ್ತೆ ಬಂದ್‌ ಮಾಡಿದರಿಂದ ಕೇಳಲು ಹೊದ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿದ್ದಲ್ಲದೆ ಹಲ್ಲೆಯನ್ನೂ ನಡೆಸಿದ್ದರು ಎನ್ನಲಾಗಿತ್ತು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ, ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ತಾಲ್ಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ ನಡೆಸಿ ಜಮೀನು ಹಾಗೂ ರಸ್ತೆ ಸರಿಪಡಿಸುವ ಕಾರ್ಯ ಮಾ.1ರಂದು ಆರಂಭಿಸಿದ್ದರು.

ಪ್ರಕರಣದಲ್ಲಿ ಮಹಿಳೆ 13 ಜನರ ವಿರುದ್ಧ ದೂರು ನೀಡಿದ್ದು, ಅದರಲ್ಲಿ ಶುಕ್ರವಾರ ತಡ ರಾತ್ರಿ ಬೀರಪ್ಪ ನಾಗನೂರ ಹಾಗೂ ಆನಂದ ಹಾದಿಮನಿ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಹುಡುಕಾಟ ನಡೆಸಿದ್ದಾರೆ ಎಂದು ಪೂಲಿಸ ಮೂಲಗಳಿಂದ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT