ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ

Last Updated 6 ಸೆಪ್ಟೆಂಬರ್ 2022, 17:22 IST
ಅಕ್ಷರ ಗಾತ್ರ

ಬೆಳಗಾವಿ: ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಮಾರ್ಕೆಟ್ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೈಲಹೊಂಗಲ ತಾಲ್ಲೂಕಿನ ಮಾಸ್ತಮರಡಿ ಗ್ರಾಮದ ಯಲ್ಲಪ್ಪ ಲಕ್ಷ್ಮಪ್ಪ ನಾಯ್ಕ ಹಾಗೂ ದುರ್ಗಪ್ಪ ಸಿದ್ಧಲಿಂಗಪ್ಪ ಕಸಾಯಿ ಬಂಧಿತರು.

ಜಿಲ್ಲೆಯ ಮಹಿಳೆಯೊಬ್ಬರಿಗೆ ನೌಕರಿ ಕೊಡಿಸುವ ಆಮಿಷ ಒಡ್ಡಿ ನಗರಕ್ಕೆ ಕರೆತಂದ ಇಬ್ಬರೂ ನಗರದ ಕೋಣೆಯೊಂದರಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಸೋಮವಾರ ರಾತ್ರಿ ನಗರದ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 24 ಗಂಟೆಗಳ ಒಳಗೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು "ಪ್ರಜಾವಾಣಿ"ಗೆ ಮಾಹಿತಿ ನೀಡಿದರು.

ಮಹಿಳೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT