ಬೆಳಗಾವಿ: 'ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಬೇಕು ಎಂದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರೆ ಸದ್ಯ ಅದು ನಗಣ್ಯ. ಅದಕ್ಕೆ ನನ್ನ ಸಮ್ಮತಿಯೂ ಇಲ್ಲ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂಥ ವಿಷಯವಲ್ಲ. ಸಿದ್ದರಾಮಯ್ಯ ಗಟ್ಟಿ ನಾಯಕರು. ಎಲ್ಲಿಯವರೆಗೆ ಹೈಕಮಾಂಡ್ ಬಯಸುವುದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ' ಎಂದರು.