ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

ವಿವಿಧ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ
Published 30 ಆಗಸ್ಟ್ 2023, 16:05 IST
Last Updated 30 ಆಗಸ್ಟ್ 2023, 16:05 IST
ಅಕ್ಷರ ಗಾತ್ರ

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಸೌಜನ್ಯ ಎಂಬ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಯವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮೈಸೂರಿನ ಒಡನಾಡಿ ಸಂಸ್ಥೆಯ ಸಂಚಾಲಕ ಸ್ಟ್ಯಾನ್ಲಿ, ‘ಸೌಜನ್ಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ ಆರೋಪಿಗಳು ಇಂದು ಸಮಾಜದಲ್ಲಿ ನಿರಾತಂಕವಾಗಿ ಓಡಾಡುತ್ತಿದ್ದಾರೆ. ಹಾಗಾಗಿ ಸರ್ಕಾರ ಈ ಪ್ರಕರಣವನ್ನು ಮರುತನಿಖೆಗೆ ಆದೇಶಿಸಿ, ಆರೋಪಿಗಳಿಗೆ ಶಿಕ್ಷೆ ಕೊಡಬೇಕು. ಸೌಜನ್ಯ ಅವರ ಸಾವಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಸ್ಪಂದನಾ ಸಂಸ್ಥೆಯ ವಿ.ಸುಶೀಲಾ, ‘ಸೌಜನ್ಯ ಅವರ ಕೊಲೆಯಾಗಿ 12 ವರ್ಷ ಕಳದಿದೆ. ಆದರೆ, ಈವರೆಗೂ ಆರೋಪಿಗಳನ್ನು ಪತ್ತೆ ಹಚ್ಚದಿರುವುದು ಸರಿಯಲ್ಲ. ತಕ್ಷಣವೇ ವಿಶೇಷ ತನಿಖಾ ದಳ ರಚಿಸಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ, ಸೌಜನ್ಯ ಸಾವಿಗೆ ನ್ಯಾಯ ಕೊಡಿಸಬೇಕು’ ಎಂದು ಆಗ್ರಹಿಸಿದರು. ಹೋರಾಟಗಾರ್ತಿ ಕಿರಣ ಬೇಡಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT