ಗುರುವಾರ , ಅಕ್ಟೋಬರ್ 17, 2019
27 °C

ಮನೆ ನಿರ್ಮಾಣಕ್ಕೆ ಕಾರ್ಯಾದೇಶ ವಿತರಣೆ

Published:
Updated:

ಬೆಳಗಾವಿ: ಪ್ರವಾಹದಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ನಿರ್ಮಾಣ ಕಾರ್ಯ ಆರಂಭಿಸಲು ಅಗತ್ಯವಿರುವ  ಮೊದಲ ಕಂತು ₹ 1 ಲಕ್ಷ ಅವರ ಖಾತೆಗೆ ಜಮಾ ಆಗಿದ್ದು, ಕಾರ್ಯಾದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿವಿಧ ತಾಲ್ಲೂಕುಗಳ ಆಯ್ದ ಫಲಾನುಭವಿಗಳಿಗೆ ಗುರುವಾರ ವಿತರಿಸಿದರು.

ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಿಎಸ್‌ಐ ವೀರಪ್ಪ ಲಟ್ಟೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತ್ನಿ ಕಸ್ತೂರಿ ಲಟ್ಟೆ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 20 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಇಲಾಖೆಯಿಂದಲೂ ₹ 30 ಲಕ್ಷ ಬಂದಿದ್ದು, ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹ 1.95 ಕೋಟಿ ಚೆಕ್ ಅನ್ನು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಸ್ತಾಂತರಿಸಿದರು.

Post Comments (+)