ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ವಿಷಯದ ಕಾರ್ಯಾಗಾರ ಮೇ 29ರಂದು

Last Updated 27 ಮೇ 2022, 8:10 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಘಟಕದಿಂದ ಮೇ 29ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ನೆಹರೂ ನಗರದ ಕೆಎಲ್‌ಇ ಜೀರಗೆ ಸಭಾಭವನದಲ್ಲಿ ‘ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ’ ಆಯೋಜಿಸಲಾಗಿದೆ.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ರಾಜ್ಯ ಘಟಕ ಅಧ್ಯಕ್ಷ ಶಿವಾನಂದ ತಗಡೂರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಉಮಾ ಮಹೇಶ ವೈದ್ಯ ವಿರಚಿತ ‘ಮಾಧ್ಯಮದವರೆ ಈ ಕಾನೂನುಗಳ ಅರಿವಿರಲಿ’ ಪುಸ್ತಕವನ್ನು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ಮುನ್ನೋಟದ ಕಿರುಹೊತ್ತಿಗೆಯನ್ನು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಬಿಡುಗಡೆ ಮಾಡಲಿದ್ದಾರೆ. ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ, ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ, ಭಾ.ಕಾ.ನಿ.ಪ. ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಪತ್ರಕರ್ತ ಎಚ್‌.ಬಿ. ಮದನಗೌಡರ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರಂದವಾಡೆ ಭಾಗವಹಿಸಲಿದ್ದಾರೆ.

ರಾಜ್ಯ ಘಟಕದ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಎಂ. ಠಾಕೂರ, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್‌, ಸೋಮಶೇಖರ ಕೆರಗೋಡು ಹಾಗೂ ನಿಂಗಪ್ಪ ಚಾವಡಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ‘ಬದಲಾಗುತ್ತಿರುವ ಕಾನೂನು ಮತ್ತು ಮಾಧ್ಯಮ’ ಹಾಗೂ ‘ಆರೋಗ್ಯಕ್ಕಾಗಿ ಸಂಗೀತ’ ವಿಷಯ ಕುರಿತು ಕ್ರಮವಾಗಿ ಮಹೇಶ ವೈದ್ಯ ಮತ್ತು ಡಾ.ಸಂತೋಷ ಬೋರಾಡೆ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT