ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಧಿವಾತ: ಶೀಘ್ರ ಪತ್ತೆಗೆ ಸಲಹೆ

Last Updated 12 ಅಕ್ಟೋಬರ್ 2020, 15:22 IST
ಅಕ್ಷರ ಗಾತ್ರ

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಎಲಬು, ಕೀಲು ಮತ್ತು ಕೀಲು ಮರುಜೋಡಣೆ ವಿಭಾಗ ಮತ್ತು ಜೆಎನ್ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ವಿಶ್ವ ಸಂಧಿವಾತ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಉಚಿತ ಸಂಧಿವಾತ ತಪಾಸಣೆ, ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಿತು.

ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಸಚಿವ ಡಾ.ವಿ.ಎ. ಕೋಠಿವಾಲೆ ಉದ್ಘಾಟಿಸಿ ಮಾತನಾಡಿ, ‘ಸಂಧಿವಾತವು ಎಲ್ಲ ವಯಸ್ಸಿನವರಲ್ಲೂ ಕಾಣಿಸಿಕೊಳ್ಳುತ್ತದೆ. ನಿಗದಿತ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಬೆಳವಣಿಗೆ ಕುಂಠಿತ ಮತ್ತು ಮಾನಸಿಕ ಅಸ್ವಸ್ಥತೆಗೆ ಎಡೆ ಮಾಡಿ ಕೊಡುತ್ತದೆ. ಬೆನ್ನುಹುರಿ ವ್ಯಾದಿಗೆ ತುತ್ತಾಗಬೇಕಾಗುತ್ತದೆ’ ಎಂದು ತಿಳಿಸಿದರು.

‘ಸಂಧಿವಾತದಿಂದಾಗಿ ಕುಳಿತಲ್ಲಿಯೇ ಕುಳಿತುಕೊಳ್ಳಬೇಕಾಗುತ್ತದೆ. ಇದರಿಂದ ರೋಗಿಯು ಮಾನಸಿಕ ಖಿನ್ನತೆಗೆ ಒಳಗಾಗುತ್ತಾನೆ. ಹೀಗಾಗಿ, ಶೀಘ್ರವಾಗಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಬೇಕು’ ಎಂದು ಸಲಹೆ ನೀಡಿದರು.

ಡಾ.ವಿ.ಡಿ. ಪಾಟೀಲ, ಜೆಎನ್‌ಎಂಸಿ ಪ್ರಾಚಾರ್ಯೆ ಡಾ.ಎನ್.ಎಸ್. ಮಹಾಂತಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಡಾ.ಆರ್.ಎಸ್. ಮುಧೋಳ, ಡಾ.ಆರ್.ಬಿ. ನೇರ್ಲಿ, ಡಾ.ರಾಜೇಶ ಪವಾರ, ಡಾ.ವಿ.ಎಂ. ಪಟ್ಟಣಶೆಟ್ಟಿ, ಡಾ.ಪ್ರಕಾಶ ವಾಲಿ, ಎಲಬು ಕೀಲು ವಿಭಾಗದ ಡಾ.ಶೈಲೇಶ ಉದಪುಡಿ, ಡಾ.ಆರ್.ಬಿ. ಉಪ್ಪಿನ, ಡಾ.ಕಿರಣ ಪಾಟೀಲ, ಡಾ.ಸತೀಶ ಪಾಟೀಲ, ಡಾ.ಸಾಹಿಲ್ ಇದ್ದರು.

ಡಾ.ಆರ್.ಎಸ್. ಜತ್ತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT