ಗುರುವಾರ , ಅಕ್ಟೋಬರ್ 28, 2021
19 °C

ಫಾರ್ಮಾಸಿಸ್ಟ್ ದಿನಾಚರಣೆ: ವಿವಿಧ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲಾ ಸಗಟು ಹಾಗೂ ಚಿಲ್ಲರೆ ಫಾರ್ಮಾಸಿಸ್ಟ್‌ಗಳ ಸಂಘದಿಂದ ನಗರದ ಬೆಳಗಾವಿ ಕ್ಲಬ್‌ನಲ್ಲಿ ವಿಶ್ವ ಫಾರ್ಮಾಸಿಸ್ಟ್ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

3 ಕಿ.ಮೀ. ಮತ್ತು 5 ಕಿ.ಮೀ. ಓಟ, 10 ಮತ್ತು 15 ಕಿ.ಮೀ. ಸೈಕ್ಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಉತ್ತರ ವಲಯ ಐಜಿಪಿ ಎನ್. ಸತೀಶ್‌ಕುಮಾರ್‌ ಸ್ಪರ್ಧೆಗಳಿಗೆ ಹಸಿರು ನಿಶಾನೆ ತೋರಿದರು.

ಉಪ ಔಷಧ ನಿಯಂತ್ರಕ ದೀಪಕ ಗಾಯಕವಾಡ, ಡಾ.ಕಿರಣ ಖೋತ ಅವರನ್ನು ಸನ್ಮಾನಿಸಲಾಯಿತು. ಸಹಾಯಕ ಔಷಧಿ ನಿಯಂತ್ರಕ ರಘುರಾಮ, ಅಧಿಕಾರಿ ಉದಯಕಿಶೋರ, ವಿವಾ ಫಾರ್ಮಾ ಸಂಸ್ಥೆಯ ಹರ್ಷವರ್ಧನ ಇಂಚಲ ಉಪಸ್ಥಿತರಿದ್ದರು.

ಸ್ಪರ್ಧೆಗಳಲ್ಲಿ 300 ಮಂದಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.