ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಿಯ ತಂತ್ರಜ್ಞಾನದಿಂದ ಸ್ವಾವಲಂಬಿ ಭಾರತ: ಪ್ರೊ.ಎಸ್‌.ವಿದ್ಯಾಶಂಕರ

Published 28 ಫೆಬ್ರುವರಿ 2024, 15:36 IST
Last Updated 28 ಫೆಬ್ರುವರಿ 2024, 15:36 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶವನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಶಕ್ತಿ ದೇಶಿಯ ಉತ್ಪನ್ನ ಹಾಗೂ ತಂತ್ರಜ್ಞಾನಗಳಲ್ಲಿದೆ’ ಎಂದು ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ದೇಶಿಯ ತಂತ್ರಜ್ಞಾನಗಳು ಮಹತ್ತರ ಪಾತ್ರ ವಹಿಸುತ್ತವೆ. ಇದು ನಮ್ಮ ರಾಷ್ಟ್ರದ  ಜ್ಞಾನಶಕ್ತಿಯನ್ನು ಜಗತ್ತಿಗೆ ಪರಿಚಯಿಸುವುದಲ್ಲದೆ, ಅಸಂಖ್ಯಾತ ಉದ್ಯೋಗಗಳನ್ನು ಹುಟ್ಟುಹಾಕುತ್ತವೆ. ಈ ತಂತ್ರಜ್ಞಾನಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಜತೆಗೆ, ಬೇರೆ ರಾಷ್ಟ್ರಗಳ ತಂತ್ರಜ್ಞಾನದ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ತಂತಜ್ಞಾನ ಆಮದು ಕಡಿಮೆಯಾಗಿ, ಆರ್ಥಿಕ ಹೊರೆ ತಗ್ಗುತ್ತದೆ’ ಎಂದರು.

ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಣಕಾಸು ಅಧಿಕಾರಿ ಎಂ.ಎ.ಸಪ್ನ, ಕಂಪ್ಯೂಟರ್ ಸೈನ್ಸ್‌ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಎಲ್.ದೇಶಪಾಂಡೆ ಉಪಸ್ಥಿತರಿದ್ದರು. ಪ್ರೊ.ಸರಸ್ವತಿ ಭೂಸನೂರ ಸ್ವಾಗತಿಸಿದರು. ನಂದಾ ಹಿರೇಮಠ್ ವಂದಿಸಿದರು. ಮೈತ್ರಿ ಕಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT