ಬೆಳಗಾವಿ: ‘ಗ್ರಾಮೀಣ ಭಾಗದಲ್ಲಿ ಜನ ಹಸುಗಳನ್ನು ಸಾಕುವ ಮೂಲಕ ಹೈನುಗಾರಿಕೆಯನ್ನು ಕುಲ ಕಸುಬಾಗಿ ಮಾಡಿಕೊಳ್ಳಬೇಕು. ಸರ್ಕಾರದ ವತಿಯಿಂದ ಹೈನುಗಾರಿಕೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ‘ವಿಶ್ವ ಪಶುವೈದ್ಯಕೀಯ ದಿನಾಚರಣೆ’ ಅಂಗವಾಗಿ ನಗರದಲ್ಲಿ 9ನೇ ಸುತ್ತಿನ ಕಾಲು– ಬಾಯಿ ರೋಗದ ಲಸಿಕಾ ಕಾರ್ಯಕ್ರಮಕ್ಕೆ ಗೋವುಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಹಿಂದೆ ದಿನಕ್ಕೆ 80 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಹೈನುಗಾರಿಕೆಗೆ ಪ್ರೋತ್ಸಾಹಿಸಿದ ಹಿನ್ನೆಲೆಯಲ್ಲಿ 1 ಕೋಟಿ ಲೀಟರಗೂ ಅಧಿಕ ಹಾಲು ಉತ್ಪಾದನೆಯಾಗುತ್ತಿದೆ. ಬಡವರಿಗೆ ಹಸು ಖರೀದಿಸಲು ಶಕ್ತಿ ಇಲ್ಲದ ಕಾರಣ ಅವರಿಗೆ ಈ ಬಾರಿಯ ಬಜೆಟ್ನಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗಿದೆ. ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗೆ ಸುಮಾರು 20 ಸಾವಿರ ಹಸುಗಳನ್ನು ವಿತರಿಸುವ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ‘ಸರ್ಕಾರದ ಯೋಜನೆಗಳು ಎಲ್ಲ ಜನರ ಮನೆ ಬಾಗಿಲಿಗೆ ತಲುಪುವಂತಹ ಯೋಜನೆಗಳಾಗಬೇಕು. ಎಲ್ಲ ಜಾನುವಾರುಗಳಿಗೆ ತಪ್ಪದೇ ಲಸಿಕೆ ನೀಡುವ ಕಾರ್ಯ ಪಶು ಸಂಗೋಪನೆ ಇಲಾಖೆ ಯಿಂದಾಗಬೇಕು’ ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅಧ್ಯಕ್ಷತೆ ವಹಿಸಿದ್ದ ಶಾಸಕ ಆಸೀಫ್ (ರಾಜು )ಸೇಠ್ ಮಾತನಾಡಿದರು. ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯುಕ್ತರಾದ ಶಿಲ್ಪಾ ನಾಗ್ ಪ್ರಾಸ್ತಾವಿಕ ಭಾಷಣ ಮಾಡಿದರು. ಶಾಸಕ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಉಪಮೇಯರ್ವ ಹಣಮಂತ ಕೊಂಗಾಲಿ, ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಶಿವಶರಣಪ್ಪ ಯಲಗೋಡ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಪಿ. ಶ್ರೀನಿವಾಸು, ಹೆಚ್ಚುವರಿ ನಿರ್ದೇಶಕ ಡಾ.ಶಿವರುದ್ರಪ್ಪ, ಡಾ.ಪ್ರಸಾದ ಮೂರ್ತಿ, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಜಿಪಂ ಸಿಇಒ ರಾಹುಲ್ ಶಿಂಧೆ, ಜಂಟಿ ನಿರ್ದೇಶಕ ಡಾ.ಎಚ್. ನಾಗರಾಜ್, ಬೆಳಗಾವಿ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ವಿ.ಎನ್. ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.