ಪ್ರಜಾವಾಣಿ ವಾರ್ತೆ

ಸವದತ್ತಿ: ತಾಲ್ಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 2025ರ ಜುಲೈನಿಂದ ಈವರೆಗೆ ಆರು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ₹11.06 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಇದರಲ್ಲಿ ₹9.92 ಕೋಟಿ ನಗದು, ₹74.89 ಲಕ್ಷ ಮೌಲ್ಯದ 635 ಗ್ರಾಂ ಚಿನ್ನಾಭರಣ ಹಾಗೂ ₹38.35 ಲಕ್ಷ ಮೌಲ್ಯದ 21.18 ಕೆ.ಜಿ ಬೆಳ್ಳಿ ಆಭರಣ ಸೇರಿವೆ.

ಈ ದೇಗುಲಕ್ಕೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ನಗದಿನ ಜತೆಗೆ, ಚಿನ್ನ ಮತ್ತು ಬೆಳ್ಳಿ ಆಭರಣವನ್ನು ಅರ್ಪಿಸಿ ಭಕ್ತಿ ಮೆರೆಯುತ್ತಾರೆ.

ಭಕ್ತರು ಹುಂಡಿಯಲ್ಲಿ ಹಾಕಿದ್ದ ಕಾಣಿಕೆಯನ್ನು ಮುಜರಾಯಿ ಇಲಾಖೆ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ಯಲ್ಲಮ್ಮ ದೇವಿ ದೇವಸ್ಥಾನ ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಎಣಿಕೆ ಮಾಡಿದರು.

‘ಪ್ರತಿದಿನ ಎಣಿಕೆ ಮುಕ್ತಾಯಗೊಂಡ ನಂತರ, ಹಣವನ್ನು ದೇವಸ್ಥಾನದ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ದೇವಸ್ಥಾನದ ಅಭಿವೃದ್ಧಿ ಕೆಲಸ, ಸಿಬ್ಬಂದಿ ವೇತನ, ವಿದ್ಯುತ್ ಬಿಲ್ ಮತ್ತಿತರ ಕೆಲಸಗಳಿಗೆ ಈ ಹಣ ಬಳಸಲಾಗುತ್ತದೆ’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.