ಶನಿವಾರ, ಜೂಲೈ 4, 2020
22 °C

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಸಂಗ(ಬೆಳಗಾವಿ): ‘ಇಲ್ಲಿಂದ ವಿಜಯಪುರಕ್ಕೆ ಸಂಪರ್ಕ ಕಲ್ಪಿಸುವ ಜೇವರ್ಗಿ–ಸಂಕೇಶ್ವರ ರಾಜ್ಯ ಹೆದ್ದಾರಿಗೆ ಸೇರುವ 4 ಕಿ.ಮೀ. ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕೆಲವು ಯುವಕರು ಉರುಳು ಸೇವೆ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದಿಂದ 42 ಕಿ.ಮೀ. ದೂರದಲ್ಲಿರುವ ವಿಜಯಪುರ ಜಿಲ್ಲೆಗೆ ತೆಲಸಂಗ ಹೋಬಳಿಯ ಜನರು ನಿತ್ಯವೂ ಓಡಾಡುತ್ತಿರುತ್ತಾರೆ. ಸಾರಿಗೆ ಸಂಸ್ಥೆಯ ಹತ್ತಾರು ಬಸ್‌ಗಳು ಮಾತ್ರವಲ್ಲದೆ ದ್ವಿಚಕ್ರವಾಹನ, ಕಾರು, ಟೆಂಪೊ ಮೊದಲಾದವು ಸೇರಿ ನೂರಾರು ವಾಹನಗಳ ಸಂಚಾರ ಸಾಮಾನ್ಯವಾಗಿರುತ್ತದೆ. ಆದರೆ, ರಸ್ತೆ ಸದ್ಯ ಹಾಳಾಗಿರುವುದರಿಂದ ಸಂಚಾರ ದುಸ್ತರವಾಗಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.

ಸಲೀಮ ಮುಜಾವರ, ಮುನ್ನಾ ಕರಜಗಿ, ಇರ್ಫಾನ್ ಮುಜಾವರ, ಆಶೀಫ್ ಮುಜಾವರ ಪಾಲ್ಗೊಂಡಿದ್ದರು.

‘ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಎಇಇ ಗೌಡಪ್ಪ ಗೂಳಪ್ಪ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು