ಬುಧವಾರ, ಸೆಪ್ಟೆಂಬರ್ 29, 2021
20 °C

ಕಾಂಗ್ರೆಸ್‌ನಿಂದ ಸಂವಿಧಾನ ವಿರೋಧಿ ನಡೆ: ಝಿರಲಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಪೆಗಾಸಸ್ ಗೂಢಚರ್ಯೆ ಪ್ರಕರಣದ ವಿಚಾರವಾಗಿ ಸಂಸತ್‍ನ ಮುಂಗಾರು ಅಧಿವೇಶನ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್‍ನ ನಡೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಆರೋಪಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಈ ಸಂಕಷ್ಟದ ಸಮಯದಲ್ಲಿ ಕೋವಿಡ್-19 ನಿರ್ವಹಣೆ, ಸೋಂಕಿನಿಂದ ಉದ್ಭವಿಸಿರುವ ಆರ್ಥಿಕ ಸಮಸ್ಯೆಗಳು, ಉತ್ಪಾದನಾ ಕ್ಷೇತ್ರದ ಸವಾಲುಗಳು, ಆಂತರಿಕ ಭದ್ರತೆ ಮತ್ತಿತರ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಿ ಎಲ್ಲರೂ ಸೇರಿ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ. ಆದರೆ, ಚರ್ಚೆಗಳಿಂದ ಪಲಾಯನ ಮಾಡುತ್ತಿರುವ ಕಾಂಗ್ರೆಸ್‌ನ ಧೋರಣೆಯು ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ’ ಎಂದು ಟೀಕಿಸಿದರು.

‘ಪೆಗಾಸಸ್ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‍ನಲ್ಲಿ ಕುರಿತು ವಿಚಾರಣೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಹಾಗೂ ಇತರ ಕೆಲವು ವಿರೋಧ ಪಕ್ಷಗಳಿಗೆ ಕೋವಿಡ್ ಹಾಗೂ ಅದರ ಅಡ್ಡ ಪರಿಣಾಮಗಳಿಗಿಂತ ಪೆಗಾಸಸ್ ವಿಷಯವೇ ದೊಡ್ಡ ಸಮಸ್ಯೆಯಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸುತ್ತಿದ್ದ ವಿರೋಧ ಪಕ್ಷಗಳು, ಈಗ ಕೋವಿಡ್ ಪಪರಿಣಾಮಗಳ ಕುರಿತು ಚರ್ಚಿಸಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ’ ಎಂದು ಹೇಳಿದರು.

ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.