ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಹೇಳಿಕೆಗೆ ಝಿರಲಿ ಖಂಡನೆ

Last Updated 29 ಜುಲೈ 2021, 13:47 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ತಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದರು ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಖಂಡನೀಯ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದನ್ನು ಕಾಂಗ್ರೆಸ್ ನಾಯಕರು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಕು ಎನ್ನುವ ದುರುದ್ದೇಶದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಲ್ಲೂ ಸಿದ್ದರಾಮಯ್ಯ ತಲೆಕೆಟ್ಟವರ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಪಕ್ಷದ ಶಿಸ್ತಿನ ಸಿಪಾಯಿಯಾಗಿ ಸಂತೋಷದಿಂದ ರಾಜೀನಾಮೆ ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಬಸವರಾಜ ಬೊಮ್ಮಾಯಿ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿ ಆಶೀರ್ವಾದ ಮಾಡಿದ್ದಾರೆ. ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

‘ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಆಗಿದ್ದು ತುಂಬಾ ಸಂತೋಷ ತಂದಿದೆ’ ಎಂದು ಹೇಳಿದರು.

ಪಕ್ಷದ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT