ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಕ್ಷರ ಜ್ಞಾನ ಎಲ್ಲರಿಗೂ ಅಗತ್ಯ,

Last Updated 20 ಜುಲೈ 2013, 7:55 IST
ಅಕ್ಷರ ಗಾತ್ರ

ಗೋಕಾಕ: ಚಿಕ್ಕವರಿರುವಾಗಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಅವರು ಮುಂದಿನ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮರಡಿಮಠದ ಡಾ. ಅದೃಶ್ಯ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಇತ್ತೀಚೆಗೆ ತಾಲ್ಲೂಕಿನ ಮರಡಿಮಠದಲ್ಲಿ ಜರುಗಿದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಶ್ರೀನಿಧಿ ಪುರಸ್ಕಾರ ಪ್ರದಾನ ಸಮಾರಂಭ ಹಾಗೂ ಶ್ರೀ ಅದೃಶ್ಯ ಗುರುಸಿದ್ದೇಶ್ವರ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ದಶಮಾನೋತ್ಸವ ವರ್ಷಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು,  ಇಂದಿನ ದಿನಗಳಲ್ಲಿ ಅಕ್ಷರ ಜ್ಞಾನ ಎಲ್ಲರಿಗೂ ಅಗತ್ಯವಾಗಿದೆ. ಪಾಲಕರು ಬಡವರಾಗಿದ್ದರೂ ಮಕ್ಕಳಿಗೆ ಶಿಕ್ಷಣ ಕೊಡಿಸುವ ಗುರಿಯನ್ನು ಹೊಂದಿರಬೇಕು ಎಂದರು.

ರಾಜ್ಯ ಮಟ್ಟದ ಶ್ರಿನಿಧಿ ಪುರಸ್ಕಾರಕ್ಕೆ ಭಾಜನರಾದ ಲೇಖಕಿ ಬೆಳಗಾವಿಯ ಡಾ. ಗುರುದೇವಿ ಹುಲೆಪ್ಪನವರಮಠ ಅವರು ಮಾತನಾಡಿ, ಸಜ್ಜನರ ಸಹವಾಸದಿಂದ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಶರೀರವನ್ನು ಕಾಯಕದ ಮೂಲಕ ಲಿಂಗಾರ್ಚನೆ ಮಾಡಬೇಕು ಎಂದರು.ಕಾರ್ಯಕ್ರಮವನ್ನು ಶ್ರೀ ಪವಾಡಯ್ಯ ಸ್ವಾಮೀಜಿ ಹಾಗೂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಬಿ.ನಾವಿ ಉದ್ಘಾಟಿಸಿದರು.

ಶಿಕ್ಷಣ ಕ್ಷೇತ್ರಕ್ಕಾಗಿ ಎನ್.ಎಸ್.ಎಫ್. ಶಿಕ್ಷಕ ಹಾಗೂ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಈಶ್ವರ ಮಮದಾಪೂರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಇತರ ಸಾಧಕರಿಗೆ ಜಿಲ್ಲಾ ಮಟ್ಟದ ಶ್ರಿನಿಧಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಕಲಾ ಸಾಧಕರು ತಮ್ಮ ಕಲೆಯನ್ನು ವೇದಿಕೆ ಮೇಲೆ ಅನಾವರಣಗೊಳಿಸಿ ಸಭಿಕರ ಪ್ರಶಂಸೆಗೆ ಪಾತ್ರರಾದರು.ಸಂಸ್ಥೆಯ ಉಪಾಧ್ಯಕ್ಷ ಮಹಾವೀರ ಚಿಂಚಣಿ, ಕಾರ್ಯದರ್ಶಿ ಕೆ.ಕೆ. ಘೀವಾರಿ, ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಸ್ಥೆಯ ತಾಲ್ಲೂಕು ಅಧ್ಯಕ್ಷ ಪ್ರಭುದೇವ ಹಡಪದ, ಲಕ್ಷ್ಮಣ ಹಡಪದ, ಮಹಾವೀರ ವೋರಾ, ನಿವೃತ್ತ ಮುಖ್ಯೋಪಾಧ್ಯಾಯ ಎನ್.ವೈ. ಗುತ್ತಗಿ, ಎಮ್.ವೈ. ಯಲಿಗಾರ, ಶಿಕ್ಷಕ ಪಿ.ಎಲ್. ಬಡೇಸ, ಎಂ.ಪಿ. ಮಲ್ಲೇಶ  ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ಬಸವರಾಜ ಘೋಡಗೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಹಾರೂಗೇರಿಮಠ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT