ಬೆಳಗಾವಿ: ಅನಧಿಕೃತವಾಗಿ ಗೈರು ಆಗಿರುವುದರಿಂದ ಸಂಸ್ಥೆಗೆ ಸುಮಾರು 1 ಕೋಟಿ ರೂಪಾಯಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 45 ಸಿಬ್ಬಂದಿಯನ್ನು ದಿಢೀರ್ ಆಗಿ ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಮಾ. 28ರಂದು ಹಮ್ಮಿಕೊಂಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ನೌಕರರ ಸಮಾವೇಶಕ್ಕೆ ತೆರಳಲೆಂದು ಅಂದು 45 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ಜಿಲ್ಲೆಯಲ್ಲಿ ಶೇ. 80ರಷ್ಟು ಬಸ್ಗಳ ಸೇವೆ ರದ್ದುಗೊಂಡಿತ್ತು. ಇದರಿಂದ ಒಂದು ದಿನಕ್ಕೆ ಸಾರಿಗೆ ಸಂಸ್ಥೆಗೆ ಸುಮಾರು 1 ಕೋಟಿ ರೂಪಾಯಿ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ 45 ಸಿಬ್ಬಂದಿ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡುವ ಮೂಲಕ ಶಿಕ್ಷೆ ವಿಧಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಚಿಕ್ಕೋಡಿ ವಿಭಾಗದಲ್ಲಿ ಅಂದು ಸುಮಾರು 60 ಲಕ್ಷ ರೂಪಾಯಿ ಹಾನಿ ಸಂಭವಿಸಿದೆ. ಅಂದು ಕೆಲಸಕ್ಕೆ ಗೈರು ಆಗಿದ್ದ 16 ಚಾಲಕ- ನಿರ್ವಾಹಕ ಸಿಬ್ಬಂದಿ, 8 ಮೆಕ್ಯಾನಿಕ್, ಒಬ್ಬ ಜೂನಿಯರ್ ಅಸಿಸ್ಟಂಟ್, ಒಬ್ಬ ಸೆಕ್ಯುರಿಟಿ ಗಾರ್ಡ್ನನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ ಬೆಳಗಾವಿ ವಿಭಾಗಕ್ಕೆ ಸುಮಾರು 40 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ. 16 ಚಾಲಕ- ನಿರ್ವಾಹಕ ಸಿಬ್ಬಂದಿ ಹಾಗೂ ಮೂವರು ಇತರ ಸಿಬ್ಬಂದಿಯನ್ನು ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ರದ್ದತಿಗೆ ಮನವಿ: `ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಾಗಿತ್ತು. ಕರ್ತವ್ಯಕ್ಕೆ ಹಾಜರಾಗದಿರಲು ಅನ್ಯ ಉದ್ದೇಶ ಇಲ್ಲದಿರುವುದರಿಂದ ತಮ್ಮ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದು~ ಎಂದು ಒತ್ತಾಯಿಸಿ ಸಾರಿಗೆ ಸಂಸ್ಥೆಯ ನೌಕರರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.