ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ ಹಿಂದೇಟು ಹಾಕುತ್ತಿರುವುದರಿಂದ ಬದಲಿ ಅಭ್ಯರ್ಥಿಯನ್ನು ಹುಡುಕಲು ಕಾಂಗ್ರೆಸ್ ಯೋಚಿಸುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರು ಈ ಕುರಿತು ಚರ್ಚೆಯನ್ನೂ ಆರಂಭಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ‘ಹುಕ್ಕೇರಿ ಅವರು ಲೋಕಸಭಾ ಚುನಾವಣೆ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಬಗ್ಗೆ ಯೋಚಿಸಲಾಗುತ್ತಿದೆ. ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದ ಸಂದರ್ಭದಲ್ಲಿ ಈ ಕುರಿತು ಚರ್ಚಿಸಿದ್ದೇನೆ. ಬದಲಿ ಅಭ್ಯರ್ಥಿಗೆ ಹುಡುಕಾಟ ನಡೆದಿದೆ’ ಎಂದರು.

ಆ ಭಾಗದ ಕಾಂಗ್ರೆಸ್‌ನ ಪ್ರಮುಖ ಮುಖಂಡರಲ್ಲಿ ಒಬ್ಬರಾಗಿದ್ದ ಶಂಕರಾನಂದ ಅವರ ಪುತ್ರ ಓಂಪ್ರಕಾಶ್ ಕಣಗಲಿ, ಮಾಜಿ ಶಾಸಕ ಎ.ಬಿ.ಪಾಟೀಲ, ಪ್ರಕಾಶ್ ಹುಕ್ಕೇರಿ ಅವರ ಪುತ್ರ ಗಣೇಶ್ ಹುಕ್ಕೇರಿ, ಬಿಜೆಪಿಯ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರ ಪುತ್ರ ಅಮಿತ್ ಕೋರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಪೈಪೋಟಿಯಲ್ಲಿದ್ದಾರೆ.

ಮನವೊಲಿಕೆ ಮುಂದುವರಿಕೆ: ಈ ಮಧ್ಯೆ ಪ್ರಕಾಶ್ ಹುಕ್ಕೇರಿ ಅವರನ್ನೇ ಚಿಕ್ಕೋಡಿ ಕ್ಷೇತ್ರದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿಯವರು ಆಸಕ್ತಿ ತೋರಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹೆಸರು ಪ್ರಕಟಿಸಿದ ನಂತರ ಅಭ್ಯರ್ಥಿ ಬದಲಾವಣೆ ಮಾಡುವುದು ಸಮಂಜಸವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.

ಸಿದ್ದರಾಮಯ್ಯ ಅವರು ಹುಕ್ಕೇರಿ ಅವರೊಂದಿಗೆ ದೂರವಾಣಿ ಮೂಲಕ ಈ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಚಿವರ ಮನವೊಲಿಸಲು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೂ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್‌ಗೆ ಮಾಹಿತಿ: ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಒತ್ತಡ ಹೇರುತ್ತಿರುವ ಮಾಹಿತಿಯನ್ನು ಎಐಸಿಸಿ ವರಿಷ್ಠರಿಗೆ ತಲುಪಿಸಲು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ನಿರ್ಧರಿಸಿದ್ದಾರೆ.
ಭೇಟಿಯ ವೇಳೆ ಈ ಬಗ್ಗೆಯೂ ಅವರು ಚರ್ಚೆ ನಡೆಸಿದ್ದಾರೆ. ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಶನಿವಾರ ಕೆಪಿಸಿಸಿಗೆ ಮನವಿ ಸಲ್ಲಿಸಿರುವ ಮಾಹಿತಿಯನ್ನು ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರೊಂದಿಗೆ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೌನಕ್ಕೆ ಜಾರಿದ ಸಚಿವ
ಗೋಕಾಕ (ಬೆಳಗಾವಿ ಜಿಲ್ಲೆ): ‘ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಕಟಿಸಿದರೂ ಅದೇ ವೇದಿಕೆಯಲ್ಲಿದ್ದ ಪ್ರಕಾಶ ಹುಕ್ಕೇರಿ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದರು.

ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಬಳಿ ಕ್ಷೇತ್ರದ ಬ್ಲಾಕ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿ ಜಾರಕಿಹೊಳಿ ಈ ವಿಷಯ ಪ್ರಕಟಿಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಲು ಹುಕ್ಕೇರಿ ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಈ ಸಭೆಯಲ್ಲಿ, ‘ಅವರ ಮನವೊಲಿಸಿದ್ದು ಈಗ ಸ್ಪರ್ಧೆಗೆ ಒಪ್ಪಿದ್ದಾರೆ’ ಎಂದು ಜಾರಕಿಹೊಳಿ ಬಹಿರಂಗಪಡಿಸಿದರು.
ಆದರೆ ಸಭೆಯಲ್ಲಿ ಹುಕ್ಕೇರಿ ಮೌನ ವಹಿಸಿರುವುದು ಅವರ ರಾಜಕೀಯ ನಡೆಯ ಕುರಿತು ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
ಬೆಳಗಾವಿ ವರದಿ: ಈ ಗೊಂದಲ ಕುರಿತು ಸಚಿವ ಪ್ರಕಾಶ ಹುಕ್ಕೇರಿ ಅವರನ್ನು ‘ಪ್ರಜಾವಾಣಿ’ ದೂರವಾಣಿ ಮೂಲಕ ಸಂಪರ್ಕಿಸಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.