ಬೆಳಗಾವಿ: ‘ಕೇಂದ್ರ ಸರ್ಕಾರವು ಕಬ್ಬಿಗೆ ನಿಗದಿಗೊಳಿಸಿರುವ ನ್ಯಾಯಬದ್ಧ ಲಾಭದಾಯಕ ಬೆಲೆ (ಎಫ್‌ಆರ್‌ಪಿ)ಯನ್ನು ಹೆಚ್ಚಿಸಬೇಕು. ರಾಜ್ಯ ಸರ್ಕಾರವು ರಾಜ್ಯ ಸಲಹಾ ಬೆಲೆ ನಿಗದಿಗೊಳಿಸುವಾಗ ಇತಿಮಿತಿಯನ್ನು ಹಾಕಿಕೊಳ್ಳುವುದನ್ನು ಕೈಬಿಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ರಾಜ್ಯ ಸರ್ಕಾರವು ಕಬ್ಬಿನ ಬೆಲೆ ಪರಿಷ್ಕರಿಸುವಂತೆ ಒತ್ತಾಯಿಸಿ ಇದೇ 4ರಂದು ಸುವರ್ಣ ವಿಧಾನಸೌಧದ ಎದುರು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಅವರನ್ನು ಆಹ್ವಾನಿಸಲಾಗುತ್ತಿದೆ. ಅದರಂತೆ ಬಿಜೆಪಿ, ಜೆಡಿಎಸ್, ಕೆಜೆಪಿ ಪಕ್ಷದ ಅಧ್ಯಕ್ಷರನ್ನೂ ಕರೆಯಲಾಗುತ್ತಿದ್ದು, ಅವರ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವಂತೆ ಕೋರಲಾಗಿದೆ. ಸರ್ಕಾರ ನ್ಯಾಯಸಮ್ಮತ ತೀರ್ಮಾನವನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ರೈತ ವಿಠ್ಠಲ ಅರಭಾವಿ ಸಾವಿನ ಸುತ್ತ ಅನೇಕ ಪ್ರಶ್ನೆಗಳು ಉದ್ಭವಿಸಿವೆ. ಅನುಮಾನ ವ್ಯಕ್ತಪಡಿಸಲು ಪ್ರತಿಯೊಬ್ಬರಿಗೂ ಅಧಿಕಾರ ಇದೆ. ನಮ್ಮಲ್ಲಿ ನ್ಯಾಯಾಂಗ ತನಿಖೆ ಕಳೆದ 35 ವರ್ಷಗಳಿಂದಲೂ ನಡೆಯುತ್ತಿದ್ದು ಯಾವುದೇ ಫಲಿತಾಂಶ ಮಾತ್ರ ಲಭಿಸುತ್ತಿಲ್ಲ. ಅದರ ಸಾಲಿಗೆ ಇದೂ ಸೇರಿಕೊಳ್ಳಲಿದೆ. ತನಿಖೆ ನಡೆಸಲಿ. ಸತ್ಯ ಹೊರಗೆ ಬರಲಿ. ಆದರೆ, ಕೇವಲ ಒಂದು ಜಾತಿಗೆ ಗುರುತಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ. ರೈತರಲ್ಲಿ ಎಲ್ಲ ಜಾತಿಯವರು ಇದ್ದಾರೆ’ ಎಂದು ಹೇಳಿದರು.

‘ಕಾರ್ಖಾನೆಯವರು ಕೇವಲ ಎಫ್‌ಆರ್‌ಪಿ ನೀಡುವುದಾಗಿ ಹೇಳುತ್ತಿದ್ದಾರೆ. ಉಳಿದ ಹಣವನ್ನು ಸರ್ಕಾರವೇ ಕೊಡಲಿ ಎಂದು ಕೇಳುತ್ತಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಪ್ರೋತ್ಸಾಹ ಧನವನ್ನು ಹೆಚ್ಚಿಸಬೇಕು’ ಎಂದರು.
‘ಸಕ್ಕರೆ ಕಾರ್ಖಾನೆಯವರು ಇನ್ನೊಂದು ಕಾರ್ಖಾನೆ ಆರಂಭಿಸಿ, ಅದರಲ್ಲಿ ಹಾನಿಯಾದರೆ ರೈತರು ಜವಾಬ್ದಾರರಲ್ಲ. ಹೀಗಾಗಿ ಇನ್ನೊಂದು ಕಾರ್ಖಾನೆ ಹಾನಿ ಸಂಭವಿಸಿದೆ ಎಂದು ಸಬೂಬು ಹೇಳುವುದು ಸರಿಯಲ್ಲ’ ಎಂದರು.

‘ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 519.6 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಲು ಕೃಷ್ಣಾ ನ್ಯಾಯಮಂಡಳಿ ಹಸಿರು ನಿಶಾನೆ ತೋರಿಸಿರುವುದು ರಾಜ್ಯಕ್ಕೆ ನ್ಯಾಯ ಸಿಕ್ಕಂತಾಗಿದೆ. ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಕೈಗೊಳ್ಳಲು ಮುಂದಾಗಬೇಕು. ಬಜೆಟ್‌ನಲ್ಲಿ ಶೇ. 25ರಷ್ಟು ಭಾಗವನ್ನು ನೀರಾವರಿಗೆ ಮೀಸಲಿಡಬೇಕು. ರಾಜ್ಯದ ನೀರಾವರಿ ಕೆಲಸಗಳನ್ನು ಸಂಪೂರ್ಣಗೊಳಿಸಬೇಕು’ ಎಂದು ಆಗ್ರಹಿಸಿದರು.

ಮಾಜಿ ಸಚಿವ ಶಶಿಕಾಂತ ನಾಯಿಕ, ಭಾರತೀಯ ಕೃಷಿಕ ಸಮಾಜದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಶಿಕಾಂತ ನಾಯಿಕ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಪೂಜಾರಿ, ಬಸವರಾಜ ಮಳಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.