ಕುಲಗೋಡ (ಗೋಕಾಕ): ಗುರುವಾರ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ನ ಗೋಕಾಕ ಶಾಖೆಯಿಂದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ಗೆ ಮಂಜೂರಾದ 60 ಲಕ್ಷ ರೂ.ಗಳ ಆರ್ಥಿಕ ನೆರವು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

ಭಾಜಪ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗೋವಿಂದ ಕೊಪ್ಪದ ಮಾತನಾಡಿ, ಸಹಕಾರ ಖಾತೆಯ ಮಾಜಿ ಸಚಿವ ಲಕ್ಷ್ಮಣ ಸವದಿ ಅವರ ಶ್ರಮದಿಂದ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಸ್ಥಾಪನೆ ಬಹಳ ಸರಳವಾಗಿದೆ ಎಂದು ಶ್ಲಾಘಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹೊರತು ಪಡಿಸಿ ರಾಷ್ಟ್ರೀಕೃತ ಬ್ಯಾಂಕ್ನಿಂದ ಪಿಕೆಪಿಎಸ್ ಬ್ಯಾಂಕ್ಗೆ ಆರ್ಥಿಕ ನೆರವು ಹರಿದು ಬಂದಿದೆ ಎಂದು ನುಡಿದರು.

ಮೂಡಲಗಿ ಪುರಸಭಾ ಸದಸ್ಯ ಮಲ್ಲಪ್ಪ ಮದಗುಣಕಿ ಅವರು ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್ನಿಂದ ಆರ್ಥಿಕ ನೆರವು ಪಡೆದ ಮೊದಲ ಪಿಕೆಪಿಎಸ್ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಪಾತ್ರವಾಗಿದೆ ಎಂದು ಹೇಳಿದರು.

ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಬಸವನಗೌಡ ಪಾಟೀಲ, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮಣ್ಣ ಭೈರನಟ್ಟಿ, ಟಿಎಪಿಸಿಎಂಎಸ್ ನಿರ್ದೇಶಕ ಅಶೋಕ ನಾಯಿಕ, ಸದಾಶಿವ ಯಕ್ಸಂಬಿ, ತಾಯವ್ವ ಪೂಜೇರಿ, ಬಸವರಾಜ ಯರಗಟ್ಟಿ, ಈರಣ್ಣ ಕೊಣ್ಣೂರ, ಬಸವರಾಜ ಬಡಗಣ್ಣವರ ಮತ್ತು ಹಣಮಂತ ಹುಣಶಿಕಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.