ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಸಾಗದ ಅಂಬೇಡ್ಕರ್‌ ಕನಸು: ಕತ್ತಿ ವಿಷಾದ

Last Updated 19 ಏಪ್ರಿಲ್ 2017, 6:09 IST
ಅಕ್ಷರ ಗಾತ್ರ

ಹುಕ್ಕೇರಿ: ಸ್ವಾತಂತ್ರ್ಯ ಸಿಕ್ಕು 70 ವರ್ಷ ಗತಿಸಿವೆ. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಉದ್ಧಾರವಾಗಬೇಕೆಂದು ಆಗ್ರಹಿಸಿ 10 ವರ್ಷಗಳ ಕಾಲ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೌಲಭ್ಯ ಕಲ್ಪಿಸಿದ್ದಾರೆ. ಆದರೆ ಅವರ ಕನಸಿಗೂ ಮತ್ತು ಇಂದಿನ ವಾಸ್ತವತೆಗೂ ಹೊಂದುತ್ತಿಲ್ಲ. ಇನ್ನೂ ಈ ಸಮಾಜದವರ ಏಳ್ಗೆ ಆಗಿಲ್ಲ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.

ತಾಲ್ಲೂಕಿನ ಬಸ್ತವಾಡ ಗ್ರಾಮದಲ್ಲಿನ ₹10ಲಕ್ಷ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದು ಸರ್ಕಾರಗಳು ಸಾಕಷ್ಟು ಸೌಲಭ್ಯ ನೀಡುತ್ತಿವೆ. ಆ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿ ಅವುಗಳ ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಈ ಸಮಾಜದ ಮುಖಂಡರು ಎಚ್ಚೆತ್ತುಕೊಂಡು ದೇಶ, ವಿದೇಶಗಳಲ್ಲಿ ಆಗುವ ವಿದ್ಯಮಾನಗಳನ್ನು ಗಮನಿಸಿ ಅದಕ್ಕೆ ನಾವು ಹೇಗೆ ಒಗ್ಗಿಕೊಳ್ಳಬೇಕು ಎಂದು ಚಿಂತನೆ ಮಾಡಬೇಕು ಎಂದು ತಿಳಿಸಿದ ಶಾಸಕರು ಒಗ್ಗಟ್ಟಿನಿಂದ ಸಕಾರಾತ್ಮಕ ಚಿಂತನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಲಹೆ ನೀಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯೆ ಅನಸೂಯಾ ಪರಗೌಡ ಪಾಟೀಲ ಭವನ ಉದ್ಘಾಟಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಡಪ್ಪ ಮಗದುಮ್ಮ ಅಧ್ಯಕ್ಷತೆ ವಹಿಸಿದ್ದರು.

ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಸುಖದೇವಿ ತಿಪ್ಪನಾಯಕ,ಜಿಲ್ಲಾ ಪಂಚಾಯ್ತಿ ಸದಸ್ಯೆ ಅನಸೂಯಾ ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ಪರಗೌಡ ಪಾಟೀಲ, ಸುರೇಶ್ ವಂಟಮೂರಿ, ಮಧುಕರ ನಲವಡೆ, ನೇಮಣ್ಣ ಮಗದುಮ್ಮ, ಕುಮಾರ ಮಗದುಮ್ಮ, ರಾಜು ಸಂಸುದ್ದಿ, ಎಇಇ ಅಜೀತ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಚೆನ್ನಯ್ಯನವರ, ಬಸು ಗಂಗನ್ನವರ ಉಪಸ್ಥಿತರಿದ್ದರು. ಅರ್ಜುನ ದೊಡಮನಿ ಸ್ವಾಗತಿಸಿದರು. ಶಂಕರ ತಿಪ್ಪನಾಯಕ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT