ಬೆಳಗಾವಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ಫೆ. 13ರಂದು ಸಂಜೆ 5ಕ್ಕೆ ಜರುಗಲಿದೆ.

ಸಂಗೀತ, ಪ್ರಬಂಧ, ಸಾಮಾನ್ಯ ಜ್ಞಾನ ಹಾಗೂ ಡ್ರಾಯಿಂಗ್ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸ ಲಾಗಿತ್ತು. ವಿಜೇತರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುತ್ತದೆ.

ಸಮಾರಂಭದ ಮುಖ್ಯ ಅತಿಥಿಯಾಗಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಎ.ಎಸ್.ದೇಶಪಾಂಡೆ ಆಗಮಿಸುವರು. ಜವಾಹರಲಾಲ್ ಮೆಡಿಕಲ್ ಕಾಲೇಜಿನ ಮಾನಸಿಕ ಶಾಸ್ತ್ರ ವಿಭಾಗದ ಡಾ. ಎಂ.ಎನ್.ಪಾಟೀಲ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಸ್ಥೆಯ ಪ್ರಸರಣ ವಿಭಾಗದ ಹಿರಿಯ ಮ್ಯಾನೇಜರ್ ಗಣೇಶ ಪ್ರಸಾದ ಅಧ್ಯಕ್ಷತೆ ವಹಿಸುವರು.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಬೆಳಗಾವಿಯ ಪ್ರಸರಣ ವಿಭಾಗದ ಮುಖ್ಯಸ್ಥ ನರಸಿಂಹ ಮೂರ್ತಿ (9845046966) ಇಲ್ಲಿಗೆ ಸಂಪರ್ಕಿಸುವಂತೆ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.