ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿ ತಿಯ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಯಾಗಿದ್ದ ಡಾ. ಅಜಯ ನಾಗ ಭೂಷಣ ಅವರ ವರ್ಗಾವಣೆ ಹಿಂದೆ ರಾಜಕೀಯ ಕೈವಾಡವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಿಲ್ಲಾ ಪಂಚಾಯತಿಯಲ್ಲಿ ಅನೇಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು, ಖಡಕ್ ಅಧಿಕಾರಿಯಂದೇ ಹೆಸರುಗಳಿ ಸಿದ್ದರು. ಇಲಾಖೆಯಲ್ಲಿ ಸುಧಾರಣೆ ತರುವತ್ತ ದಿಟ್ಟ ಹೆಜ್ಜೆ ಇಡುವ ಮೂಲಕ, ಪಾರದರ್ಶಕತೆಗೆ ಆದ್ಯತೆ ನೀಡಿದ್ದರು. ಇದರಿಂದ ಅನೇಕರಿಗೆ ಕಿರಿಕಿರಿಯಾಗಿತ್ತು ಎಂದು ಹೇಳಲಾಗಿದೆ.

ಕಳೆದ 2011ರ ಜುಲೈ 20 ರಂದು ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಡಾ. ಅಜಯ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 17 ಮಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳನ್ನು ಅಮಾನತು ಮಾಡಿದ್ದರು.

ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಪ್ರಭಾರ ಆಯುಕ್ತರಾಗಿಯೂ ಅವರು ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ವರ್ಗಾವಣೆಯಿಂದ ಜಿಲ್ಲಾ ಪಂಚಾಯಿತಿಯಲ್ಲಿ ಸುಧಾರಣೆಗೆ ಹಿನ್ನೆಡೆ ಉಂಟಾದಂತಾಗಿದೆ ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.