ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಮ ಹವನದಿಂದ ಸಂಕಷ್ಟ ದೂರ: ಪಾಟೀಲ

Last Updated 13 ಫೆಬ್ರುವರಿ 2012, 6:40 IST
ಅಕ್ಷರ ಗಾತ್ರ

ರಾಮದುರ್ಗ: ಸಮಾಜಕ್ಕೆ ಎದುರಾಗುವ ಸಂಕಷ್ಟಗಳನ್ನು ದೂರ ಮಾಡಲು ಯಜ್ಞ ಯಾಗಾದಿಗಳನ್ನು ಮಾಡಲಾಗತ್ತಿದೆ ಎಂದು ಎಂದು ಮಾಜಿ ಶಾಸಕ ಎನ್. ವಿ. ಪಾಟೀಲ ಹೇಳಿದರು.

ಪಟ್ಟಣದ ಶಂಕರಮಠದಲ್ಲಿ ನಡೆಯುತ್ತಿರುವ ರಜತ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕೆಲ ಮಾನಸಿಕ ಸೀಮಿತ ಕಳೆದುಕೊಂಡವರು ಆಧ್ಯಾತ್ಮದ ಕುರಿತು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿರುದ್ದಾರೆ ಎಂದು ವಿಷಾದ ಪಡೆಸಿದರು.

ಭಾರತ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನ ಮಾನ ನೀಡಿ ಗೌರವಿಸಿದ ಕೀರ್ತಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಹೀಗಾಗಿಯೇ ನಾಲ್ಕು ಕಡೆಗಳಲ್ಲಿ ಸ್ತ್ರೀಪೀಠಗಳನ್ನು ಸ್ಥಾಪಿಸಿದ್ದಾರೆ.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಪೂಜಾರಿ ಮಾತನಾಡಿ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಇಲ್ಲಿನ ಶ್ರೀಶಂಕರ ಮಠದಲ್ಲಿ ಏನೋ ಶಕ್ತಿ ಅಡಗಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಅವರು ನುಡಿದರು.

ಮನುಷ್ಯ ಯಾವುದೇ ಸಾಧನೆ ಮಾಡಿದರೂ ಮನುಷ್ಯ ಶಕ್ತಿಗೆ ಮೀರಿ ದೈವ ಶಕ್ತಿ ಇರುತ್ತದೆ. ಆ ನಿಟ್ಟಿನಲ್ಲಿ ಅದನ್ನು ಪಡೆಯಲು ಆಧ್ಯಾತ್ಮಿಕತೆಬೇಕು. ವಾತಾವರಣ ಶುದ್ಧೀಕರಣಕ್ಕೆ ಹೋಮ ಹವನಗಳು ನಡೆಯಬೇಕು ಎಂದು ಅವರು ತಿಳಿಸಿದರು.

ಜೆಡಿಎಸ್ ಮುಖಂಡರಾದ ಬಸವರಾಜ  ಹಿರೇರಡ್ಡಿ, ಶಿದ್ಲಿಂಗಪ್ಪ ಮುದೇನೂರ, ರಮೇಶ ದೇಶಪಾಂಡೆ ಹಾಜರಿದ್ದರು. ಚಿದಂಬರ ಇನಾಮದಾರ ಕಾರ್ಯಕ್ರಮ ನಿರೂಪಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT