ಬುಧವಾರ, ಮೇ 18, 2022
28 °C
ಅವಳಿ ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳ ಮೇಲೆ ಹೆಚ್ಚಿನ ನಿಗಾ, ಪರಿಣಾಮಕಾರಿ ಕ್ರಮ

ಬಳ್ಳಾರಿ–ವಿಜಯನಗರ: 292 ಬಾಲ್ಯ ವಿವಾಹಗಳಿಗೆ ತಡೆ

ಶಶಿಕಾಂತ ಎಸ್‌. ಶೆಂಬೆಳ್ಳಿ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಹೆಚ್ಚಿನ ನಿಗಾ ವಹಿಸಿ, ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡ ಪರಿಣಾಮ ಅವಳಿ ಜಿಲ್ಲೆಗಳಾದ ಬಳ್ಳಾರಿ–ವಿಜಯನಗರದಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ತಗ್ಗುತ್ತಿದೆ.

2021ರ ಏಪ್ರಿಲ್‌ನಿಂದ 2022ರ ಮಾರ್ಚ್‌ವರೆಗೆ ಎರಡೂ ಜಿಲ್ಲೆಗಳಲ್ಲಿ 292 ಬಾಲ್ಯ ವಿವಾಹಗಳನ್ನು ಮಕ್ಕಳ ರಕ್ಷಣಾ ಘಟಕ ತಡೆದಿದೆ.

ಬಳ್ಳಾರಿ ಜಿಲ್ಲೆಯೊಂದರಲ್ಲೇ 147 ಬಾಲ್ಯ ವಿವಾಹಗಳನ್ನು ತಡೆಯಲಾಗಿದ್ದು, 13 ಪ್ರಕರಣ ದಾಖಲಾಗಿವೆ. 122 ಜನರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಇನ್ನು, ವಿಜಯನಗರ ಜಿಲ್ಲೆಯಲ್ಲಿ 145 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದ್ದು, 118 ಜನರಿಂದ ಮುಚ್ಚಳಿಕೆ ಬರೆಸಿಕೊಂಡು 23 ಪ್ರಕರಣ ದಾಖಲಿಸಲಾಗಿದೆ. ಬಾಲ್ಯವಿವಾಹ ಹಾಗೂ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಮೊದಲಿನಿಂದಲೂ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುವ ಗ್ರಾಮಗಳ ಮೇಲೆ ಹೆಚ್ಚಿನ ನಿಗಾ ವಹಿಸಿ ತಡೆಯಲಾಗಿದೆ. ಈ ಕುರಿತು ವ್ಯಾಪಕ ಪ್ರಚಾರ ನಡೆಸಿದ್ದರಿಂದ ಸಾರ್ವಜನಿಕರಿಂದಲೂ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ, ಬಾಲ್ಯ ವಿವಾಹ ನಿಲ್ಲಿಸಿದ್ದಾರೆ. ಅಲ್ಲದೇ ಸಾಮೂಹಿಕ ವಿವಾಹಗಳ ಮೇಲೂ ಹೆಚ್ಚಿನ ನಿಗಾ ವಹಿಸಿದ್ದರು. ಹೆಚ್ಚಿನ ಕಡೆಗಳಲ್ಲಿ ನಡೆದ ಸಾಮೂಹಿಕ ವಿವಾಹಗಳಲ್ಲಿ ಈಗ ಬಾಲ್ಯ ವಿವಾಹಗಳು ನಡೆದಿಲ್ಲ.

ಬಡತನದ ಕಾರಣಕ್ಕಾಗಿಯೇ ಹೆಚ್ಚಿನವರು ಮಕ್ಕಳು ವಯಸ್ಸಿಗೆ ಬರುವುದಕ್ಕೂ ಮೊದಲೇ ಅವರನ್ನು ಮದುವೆ ಮಾಡಲು ಮುಖ್ಯ ಕಾರಣ ಎನ್ನುವುದು ಗೊತ್ತಾಗಿದೆ. ಮನೆಯಲ್ಲಿ ಹೆಚ್ಚು ಹೆಣ್ಣು ಮಕ್ಕಳು, ಆರ್ಥಿಕ ಸಮಸ್ಯೆಯೇ ಬೇಗ ಮದುವೆ ಮಾಡುವುದಕ್ಕಿರುವ ಇತರೆ ಕಾರಣಗಳು ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು