ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

365 ಸಂಪರ್ಕಿತರಿಗೆ ಪರೀಕ್ಷೆ

ಮೆಡಿಕಲ್‌ ವಿದ್ಯಾರ್ಥಿಗಳಿಗೆ ಕೋವಿಡ್‌
Last Updated 31 ಮಾರ್ಚ್ 2021, 15:50 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ಸಪ್ತಗಿರಿ ಪ್ಯಾರಾ ಮೆಡಿಕಲ್‌ ಕಾಲೇಜಿನ 11 ವಿದ್ಯಾರ್ಥಿಗಳಲ್ಲಿ ಮಂಗಳವಾರ ಕೋವಿಡ್‌–19 ದೃಢಪಟ್ಟಿರುವುದರಿಂದ ಅವರ ಸಂಪರ್ಕಕ್ಕೆ ಬಂದಿದ್ದ 365 ಹಾಸ್ಟೆಲ್‌ ವಿದ್ಯಾರ್ಥಿಗಳ ಪರೀಕ್ಷೆ ಬುಧವಾರ ಮಾಡಲಾಗಿದೆ.

ಈ ಪೈಕಿ ಇಬ್ಬರು ವಿದ್ಯಾರ್ಥಿಗಳಲ್ಲಿ ಕೋವಿಡ್‌–19 ದೃಢಪಟ್ಟಿದೆ. ಈ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಮಾಡಿಸಿಕೊಂಡು ಅವರ ಗ್ರಾಮಗಳಿಗೆ ಹಿಂತಿರುಗಿದ್ದರು. ಈಗ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಸದ್ಯ ಇಬ್ಬರು ವಿದ್ಯಾರ್ಥಿಗಳನ್ನು ಹೋಂ ಐಸೋಲೇಷನ್‌ನಲ್ಲಿ ಇಡಲಾಗಿದೆ.

ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ಅವರು ಮಂಗಳವಾರ ನಗರದ ಹಲವು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ವ್ಯಾಪ್ತಿಯಲ್ಲಿ ಬುಧವಾರ 26 ಹೊಸ ಕೋವಿಡ್‌–19 ಪ್ರಕರಣ ದೃಢವಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT