ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಪ್ತಾಹದಲ್ಲಿ 801 ಕಡತ ವಿಲೇವಾರಿ

Last Updated 18 ನವೆಂಬರ್ 2018, 9:49 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಕಡತ ವಿಲೇವಾರಿ ಸಪ್ತಾಹಕ್ಕೆ ಭಾನುವಾರ ತೆರೆ ಬಿತ್ತು.

ಇದೇ 12ರಿಂದ ಆರಂಭಗೊಂಡಿದ್ದ ಸಪ್ತಾಹದಲ್ಲಿ ಒಟ್ಟು 1,487 ಬಾಕಿ ಇರುವ ಕಡತಗಳ ಪೈಕಿ 801 ಕಡತಗಳನ್ನು ವಿಲೇವಾರಿ ಮಾಡಲಾಯಿತು.

‘ಕೆಲವು ಕಡತಗಳು ಒಂದು ವರ್ಷ, ಕೆಲವು ಆರು ತಿಂಗಳಿಂದ ವಿಲೇವಾರಿ ಆಗದೇ ಬಾಕಿ ಉಳಿದಿದ್ದವು. ಅವುಗಳನ್ನು ಕಡತ ವಿಲೇವಾರಿ ಸಪ್ತಾಹದಲ್ಲಿ ವಿಲೇವಾರಿ ಮಾಡಲಾಗಿದೆ. ರಜಾ ದಿನವಾದ ಭಾನುವಾರ ಕೂಡ ಕಚೇರಿಯ ಸಿಬ್ಬಂದಿ ಕಷ್ಟಪಟ್ಟು ಕೆಲಸ ನಿರ್ವಹಿಸಿದ್ದಾರೆ. ಮಿಕ್ಕುಳಿದ 680 ಕಡತಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಲಾಗುವುದು’ ಎಂದು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿಧಾನಸಭೆ ಚುನಾವಣೆ, ಇತ್ತೀಚೆಗೆ ನಡೆದ ಲೋಕಸಭೆ ಉಪಚುನಾವಣೆ ಸೇರಿದಂತೆ ಅನ್ಯ ಸರ್ಕಾರಿ ಕಾರ್ಯಕ್ರಮಗಳಿಂದ ಕಡತಗಳ ವಿಲೇವಾರಿ ಕೆಲಸ ಬಾಕಿ ಉಳಿದಿತ್ತು. ಒಂದು ವಾರದಲ್ಲಿ ಹೆಚ್ಚಿನ ಕಡತಗಳನ್ನು ವಿಲೇವಾರಿ ಮಾಡಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT