ಭಾನುವಾರ, ಸೆಪ್ಟೆಂಬರ್ 19, 2021
23 °C

ಹೊಸಪೇಟೆ: ಕಲಾಂ ಜನ್ಮದಿನ, ಸ್ವಚ್ಛತಾ ಕಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್‌ ಕಲಾಂ ಅವರ ಜನ್ಮದಿನದ ಪ್ರಯುಕ್ತ ನಗರದ ಶಿರಸಿನಕಲ್ಲು ರಸ್ತೆಯಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಅಬ್ದುಲ್‌ ಕಲಾಂ ಸೇವಾ ಟ್ರಸ್ಟ್‌ ಕಾರ್ಯಕರ್ತರು ಶಿರಸಿನಕಲ್ಲು 15ನೇ ಕ್ರಾಸಿನಲ್ಲಿ ಕಲಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.

ಟ್ರಸ್ಟ್‌ ಅಧ್ಯಕ್ಷ ಖಾದರ್ ಬಾಷ ಮಾತನಾಡಿ, ‘ಕಲಾಂ ಅವರ ಕನಸುಗಳನ್ನು ನನಸು ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ದೇಶದಲ್ಲಿ ಸ್ವಚ್ಛತೆ, ಸಮೃದ್ಧಿ ಇರಬೇಕೆಂದು ಅವರು ಪದೇ ಪದೇ ಹೇಳುತ್ತಿದ್ದರು. ಆ ನಿಟ್ಟಿನಲ್ಲಿ ನಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು