ಬುಧವಾರ, ಅಕ್ಟೋಬರ್ 28, 2020
23 °C

ಹೊಸಪೇಟೆ: ಡ್ರಗ್ಸ್‌ ಜಾಲ ಮಟ್ಟ ಹಾಕಲು ಎಬಿವಿಪಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡ್ರಗ್ಸ್‌ ಜಾಲ ಮಟ್ಟ ಹಾಕಲು ಕಠಿಣ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಮನವಿ

ಹೊಸಪೇಟೆ: ರಾಜ್ಯದಲ್ಲಿ ಬೇರೂರಿರುವ ಡ್ರಗ್ಸ್‌ ಜಾಲ ಮಟ್ಟ ಹಾಕಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಆಗ್ರಹಿಸಿದೆ.

ಈ ಸಂಬಂಧ ಪರಿಷತ್ತಿನ ಕಾರ್ಯಕರ್ತರು ಸೋಮವಾರ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.

ಮಾದಕ ವಸ್ತುಗಳ ಪಿಡುಗು ರಾಜ್ಯದಲ್ಲಿ ಹೆಚ್ಚಿರುವುದು ದುರದೃಷ್ಟಕರ. ಯುವ ಸಮೂಹವನ್ನು ಗುರಿಯಾಗಿರಿಸಿ ಈ ದಂಧೆಯನ್ನು ರಾಜ್ಯದಲ್ಲಿ ನಡೆಸಲಾಗುತ್ತಿದ್ದು, ಅನೇಕರು ಅದರ ವ್ಯಸನಿಗಳಾಗುತ್ತಿದ್ದಾರೆ. ಸಿನಿಮಾ ಜಗತ್ತಿನವರು ಇದಕ್ಕೆ ಹೊರತಾಗಿಲ್ಲ. ಈ ಕುರಿತು ಯುವ ಪೀಳಿಗೆಯಲ್ಲಿ ಅರಿವು ಮೂಡಿಸಲು ಪರಿಷತ್ತಿನಿಂದ ರಾಜ್ಯದಾದ್ಯಂತ ‘ಡ್ರಗ್ಸ್‌ ಮುಕ್ತ ಕರ್ನಾಟಕ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಯುವಸಮೂಹವನ್ನು ಡ್ರಗ್ಸ್‌ ವ್ಯಸನಕ್ಕೆ ದೂಡುವುದಲ್ಲದೇ ಭಯೋತ್ಪಾದಕರು ಅದರ ಮೂಲಕ ದೇಶವನ್ನು ಹಾಳು ಮಾಡುವ ಸಂಚು ರೂಪಿಸಿದ್ದಾರೆ. ಅದರಲ್ಲೂ ಪ್ರತಿಷ್ಠಿತ ಕಾಲೇಜುಗಳ ಕ್ಯಾಂಪಸ್‌ಗಳನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಪ್ರತೀಕ ಮಾಳಿ ಹಾಗೂ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು