ಜೆಸ್ಕಾಂ ಇನ್‌ಸ್ಪೆಕ್ಟರ್ ವಿಜಯಕುಮಾರ್ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ

ಬಳ್ಳಾರಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜೆಸ್ಕಾಂ ಇನ್‌ಸ್ಪೆಕ್ಟರ್ ವಿಜಯಕುಮಾರ್ ಅವರ ಮನೆ ಮತ್ತು ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಗುರುವಾರ ನಸುಕಿನಲ್ಲಿ ದಾಳಿ ನಡೆಸಿದ್ದಾರೆ.
ವಿಜಯಕುಮಾರ್ ಅವರಿಗೆ ಸೇರಿದ ಬಳ್ಳಾರಿಯ ಹಾವಂಭಾವಿ ಮನೆ, ಬಸವೇಶ್ವರ ಬಡಾವಣೆ ಮನೆ, ಕಪ್ಪಗಲ್ಲ ರಸ್ತೆಯಲ್ಲಿರುವ ಜೆಸ್ಕಾಂ ಕಚೇರಿ, ಬೆಂಗಳೂರಿನ ಮನೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ ಎಂದು ಎಸಿಬಿ ಹೆಚ್ಚುವರಿ ಮಹಾನಿರ್ದೇಶಕ ಸೀಮಂತ್‌ಕುಮಾರ್ ಸಿಂಗ್ ಖಚಿತಪಡಿಸಿದ್ದಾರೆ.
ವಿಜಯಕುಮಾರ್ ಮನೆ ಮೇಲೆ ದಾಳಿ ನಡೆಸಿ ಶೋಧಿಸಲಾಗುತ್ತಿದೆ. ಬಳಿಕ ವಿವರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಎಂಟು ಜನ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ. ವಿಜಯ ಕುಮಾರ್ ಸದ್ಯ ಹಾವಂಭಾವಿ ಮನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಜಯ ಕುಮಾರ್ ಇತ್ತೀಚೆಗೆ ಬಡ್ತಿ ಪಡೆದು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಬಳ್ಳಾರಿ ಉಸ್ತುವಾರಿ ಹೊತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.