6

ವಿಮ್ಸ್‌ ಸಹಾಯಕ ಆಡಳಿತಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Published:
Updated:

ಬಳ್ಳಾರಿ: ಇಲ್ಲಿನ ವಿಮ್ಸ್‌ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಟಿ.ದುರುಗಪ್ಪ ಅವರ ಮೆಲೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೋಮವಾರ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.

ನಗರದ ಬ್ರಹ್ಮಯ್ಯ ಕಾಲೊನಿಯಲ್ಲಿರುವ ದುರುಗಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಅವರ ಬಳಿ ಆದಾಯಕ್ಕಿಂತ ಹೆಚ್ಚು ಆಸ್ತಿ ಇದೆ ಎಂಬ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಅಧಿಕಾರಿಯ ತಾಯಿ ಮತ್ತು ಸಹೋದರಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !